ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೆಂಕಟಾಚಲ ಶಾಸ್ತ್ರಿ, ಸಯ್ಯದ್ ಇಸಾಕ್‌ಗೆ ಕನ್ನಡ ಪುಸ್ತಕ ಪ್ರಾಧಿಕಾರ ಪ್ರಶಸ್ತಿ

ಕನ್ನಡ ಪುಸ್ತಕ ಪ್ರಾಧಿಕಾರದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟ
Last Updated 2 ಜುಲೈ 2021, 20:10 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರವು 2020ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿಗಳನ್ನು ಶುಕ್ರವಾರ ಪ್ರಕಟಿಸಿದೆ. ₹ 75 ಸಾವಿರ ಬಹುಮಾನ ಹೊಂದಿರುವ ‘ಡಾ.ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’ಗೆ ಹಿರಿಯ ವಿದ್ವಾಂಸ ಡಾ.ಟಿ.ವಿ. ವೆಂಕಟಾಚಲ ಶಾಸ್ತ್ರಿ ಆಯ್ಕೆಯಾಗಿದ್ದಾರೆ.

ಪ್ರಾಧಿಕಾರದ ಅಧ್ಯಕ್ಷ ಡಾ.ಎಂ.ಎನ್. ನಂದೀಶ್ ಹಂಚೆ ನೇತೃತ್ವದಲ್ಲಿ ಈ ಆಯ್ಕೆಗಳು ನಡೆದಿವೆ. ‘ಅತ್ಯುತ್ತಮ ಪ್ರಕಾಶನ ಪ್ರಶಸ್ತಿ’ಗೆ ಹುಬ್ಬಳ್ಳಿಯ ಸಾಹಿತ್ಯ ಪ್ರಕಾಶನ ಭಾಜನವಾಗಿದೆ. ಈ ಪ್ರಶಸ್ತಿಯು ₹ 1 ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

‘ಡಾ.ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’ಗೆ ಮೈಸೂರಿನ ಸೈಯದ್ ಇಸಾಕ್ ಅವರನ್ನುಆಯ್ಕೆ ಮಾಡಲಾಗಿದೆ. ‘ಡಾ. ಅನುಪಮಾ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿ’ಗೆ ಡಾ. ಸುಧೀಂದ್ರ ಹಾಲ್ದೊಡ್ಡೇರಿ ಅವರು ಭಾಜನರಾಗಿದ್ದಾರೆ. ಈ ಪ್ರಶಸ್ತಿಗಳು ಕ್ರಮವಾಗಿ ₹ 50 ಸಾವಿರ ಹಾಗೂ ₹ 25 ಸಾವಿರ ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ.

‘ಪುಸ್ತಕ ಬಹುಮಾನಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಕೆಲವೇ ದಿನಗಳಲ್ಲಿ ಪ್ರಕಟ ಮಾಡಲಾಗುವುದು’ ಎಂದು ಪ್ರಕಟಣೆಯಲ್ಲಿ ನಂದೀಶ್ ಹಂಚೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT