ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿ.ಎಂ.ಹೆಗ್ಡೆ, ಕಲ್ಗುಡಿಗೆ ಪುಸ್ತಕ ಪ್ರಾಧಿಕಾರದ ಪ್ರಶಸ್ತಿ

ವಾರ್ಷಿಕ ಪ್ರಶಸ್ತಿ ಪ್ರಕಟಿಸಿದ ಪ್ರಾಧಿಕಾರ
Last Updated 7 ಅಕ್ಟೋಬರ್ 2020, 19:42 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರವು 2019ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿಗಳನ್ನು ಬುಧವಾರ ಪ್ರಕಟಿಸಿದ್ದು, ₹ 75 ಸಾವಿರ ಮೊತ್ತದ ಬಹುಮಾನ ಹೊಂದಿರುವ ಡಾ.ಎಂ.ಎಂ.ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿಗೆ ವಿಮರ್ಶಕ ಹಾಗೂ ವಿದ್ವಾಂಸ ಡಾ. ಬಸವರಾಜ ಕಲ್ಗುಡಿ ಆಯ್ಕೆಯಾಗಿದ್ದಾರೆ.

ಪ್ರಾಧಿಕಾರದ ಅಧ್ಯಕ್ಷ ಡಾ.ಎಂ.ಎನ್. ನಂದೀಶ್ ಹಂಚೆ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಘೋಷಿಸಿದ್ದಾರೆ. ಅತ್ಯುತ್ತಮ ಪ್ರಕಾಶನ ಪ್ರಶಸ್ತಿಗೆ ‘ಐಬಿಎಚ್ ಪ್ರಕಾಶನ’ ಆಯ್ಕೆಯಾಗಿದ್ದು, ಈ ಪ್ರಶಸ್ತಿ ₹1 ಲಕ್ಷ ನಗದು ಬಹುಮಾನ ಹೊಂದಿದೆ. ಡಾ.ಜಿ.ಪಿ.ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿಗೆ ಸಿಂದಗಿಯ ಎಂ.ಎನ್. ಪಡಶೆಟ್ಟಿ ಹಾಗೂ ಬೆಂಗಳೂರಿನ ಕೆ. ರಾಜಕುಮಾರ್ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯು ತಲಾ ₹50 ಸಾವಿರ ಬಹುಮಾನ ಒಳಗೊಂಡಿದೆ.

ಡಾ.ಅನುಪಮಾ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿಗೆ ಡಾ.ಬಿ.ಎಂ. ಹೆಗ್ಡೆ (₹20 ಸಾವಿರ ನಗದು ಬಹುಮಾನ)
ಭಾಜನರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT