ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಟಿ ಕಂಠ ಗೀತ ಗಾಯನ ಸ್ಪರ್ಧೆಯಲ್ಲಿ ಭಾಗವಹಿಸಲು ಸೂಚನೆ

Last Updated 22 ಅಕ್ಟೋಬರ್ 2022, 19:41 IST
ಅಕ್ಷರ ಗಾತ್ರ

ಬೆಂಗಳೂರು: ಕೋಟಿ ಕಂಠ ಗಾಯನ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಬೆಂಗಳೂರು ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಎಲ್ಲಾ ಕಾಲೇಜುಗಳು, ಸ್ನಾತಕೋತ್ತರ ವಿಭಾಗಗಳು ಮತ್ತು ಕಚೇರಿಗಳಿಗೆ ಸೂಚಿಸಲಾಗಿದೆ.

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಅ.28 ರಂದು ಬೆಳಿಗ್ಗೆ 11 ಗಂಟೆಗೆ ‘ಕೋಟಿ ಕಂಠ ಗೀತ ಗಾಯನ’ ಕಾರ್ಯಕ್ರಮವನ್ನು ಸರ್ಕಾರದಿಂದ ಆಯೋಜಿಸಿ ಒಂದು ಕೋಟಿಗೂ ಹೆಚ್ಚು ಜನರನ್ನು ಸೇರಿಸಲು ವ್ಯವಸ್ಥೆ ಮಾಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಒಂದು ಕೋಟಿ ಜನರನ್ನು ಭಾಗಿಯಾಗಿಸಲು ಉದ್ದೇಶಿಸಲಾಗಿದೆ. ಕಾಲೇಜುಗಳ ಪ್ರಾಂಶುಪಾಲರು, ವಿಭಾಗಗಳ ಕಚೇರಿಯ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಅಕ್ಟೋಬರ್ 28ರೊಳಗೆ https://kannadasiri.karnataka.gov.in/kkg/public/ ಲಿಂಕ್‌ ಮೂಲಕ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT