ಬುಧವಾರ, ಮಾರ್ಚ್ 29, 2023
28 °C

ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ: ಕನ್ನಡದಲ್ಲಿ ಮೋದಿ ಶುಭಾಶಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಇಂದು 66ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಕನ್ನಡಿಗರಿಗೆ ಶುಭ ಕೋರಿದ್ದಾರೆ.

ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು. ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ.‌‌‌ ಎಂದು ಟ್ವಿಟ್‌ನಲ್ಲಿ ತಿಳಿಸಿದ್ದಾರೆ.

ಸದ್ಯ, ಪ್ರಧಾನಿ ನರೇಂದ್ರ ಮೋದಿಯವರು ಗ್ಲಾಸ್ಗೋದಲ್ಲಿನ ಹವಾಮಾನ ಬದಲಾವಣೆಯ ವಿಶ್ವಸಂಸ್ಥೆಯ ಚೌಕಟ್ಟಿನ (ಯುಎನ್‌ಎಫ್‌ಸಿಸಿಸಿ) 26ನೇ ಕೋಪ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದು, ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು