ಬುಧವಾರ, ಸೆಪ್ಟೆಂಬರ್ 30, 2020
22 °C

ರಾಷ್ಟ್ರಕವಿ ಪುರಸ್ಕಾರಕ್ಕೆ ಆಯ್ಕೆ ಸಮಿತಿ ರಚಿಸಿ: ಸಾಹಿತ್ಯ ಪರಿಷತ್ತು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಷ್ಟ್ರಕವಿ ಪುರಸ್ಕಾರ ಆಯ್ಕೆಗೆ ಹೊಸದಾಗಿ ಸಮಿತಿ ರಚಿಸಿ, ಗೌರವಕ್ಕೆ ಅರ್ಹರಾದವರ ಹೆಸರನ್ನು ಘೋಷಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಸರ್ಕಾರವನ್ನು ಒತ್ತಾಯಿಸಿದೆ. 

ಈ ಸಂಬಂಧ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ಅವರಿಗೆ ಪತ್ರ ಬರೆದಿದ್ದಾರೆ. ‘ಕೆಲ ವರ್ಷಗಳ ಹಿಂದೆ ಅಂದಿನ ಸರ್ಕಾರ ರಾಷ್ಟ್ರಕವಿ ಗೌರವಕ್ಕೆ ಅರ್ಹರಾದವರ ಹೆಸರನ್ನು ಸೂಚಿಸಲು ಕೋ. ಚೆನ್ನಬಸ‍ಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಆದರೆ, ಆ ಸಮಿತಿಯು ಯಾರ ಹೆಸರನ್ನು ಸೂಚಿಸಿರಲಿಲ್ಲ. ರಾಷ್ಟ್ರಕವಿ ಗೌರವಕ್ಕೆ ಸೂಕ್ತರಾದವರು ಯಾರೂ ಇಲ್ಲ ಎಂಬ ವರದಿ ನೀಡಿತ್ತು. ಇದು ಸಮಿತಿಗೆ ನೀಡಿದ ಕಾರ್ಯಷರತ್ತಿನ ಉಲ್ಲಂಘನೆಯಾಗಿದೆ. ಈಗ ಹೊಸದಾಗಿ ಸಮಿತಿ ರಚಿಸಿ, ಯೋಗ್ಯರಾದವರ ಹೆಸರನ್ನು ಸೂಚಿಸಬೇಕು’ ಎಂದು ಆಗ್ರಹಿಸಿದ್ದಾರೆ. 

 ‘ರಾಷ್ಟ್ರಕವಿ ಗೌರವಕ್ಕೆ ಯೋಗ್ಯರಾದವರು ಕನ್ನಡದಲ್ಲಿ ಬೇಕಾದಷ್ಟು ಸಾಹಿತಿಗಳು ಇದ್ದಾರೆ. ರಾಯಚೂರಿನಲ್ಲಿ ನಡೆದ 82ನೇ  ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರಾಷ್ಟ್ರಕವಿ ಪುರಸ್ಕಾರ ನೀಡುವ ಪದ್ಧತಿಯನ್ನು ಮುಂದುವರಿಸಬೇಕು ಎಂಬ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿತ್ತು. ಈ ಗೌರವವನ್ನು ಯಾರಿಗೆ ನೀಡಬೇಕು ಎನ್ನುವುದು ಸರ್ಕಾರಕ್ಕೆ ಬಿಟ್ಟ ವಿಚಾರ. ಒಂದೂವರೆ ಸಾವಿರ ವರ್ಷಗಳ ಲಿಖಿತ ಸಾಹಿತ್ಯ ಪರಂಪರೆ ಇತಿಹಾಸವಿರುವ ಇಲ್ಲಿ ರಾಷ್ಟ್ರಕವಿ ಗೌರವಕ್ಕೆ ಅರ್ಹರಾದವರು ಇಲ್ಲ ಎನ್ನುವುದು ಭಾಷೆಗೆ ಮಾಡಿದ ಅವಮಾನ’ ಎಂದು ತಿಳಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು