ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಂಡು ಕೇಳರಿಯದ ರೀತಿಯಲ್ಲಿ ಸಾಹಿತ್ಯ ಸಮ್ಮೇಳನ’

Last Updated 4 ಮಾರ್ಚ್ 2022, 16:27 IST
ಅಕ್ಷರ ಗಾತ್ರ

ಬೆಂಗಳೂರು: ‘ಹಿಂದೆಂದು ಕಂಡು ಕೇಳರಿಯದ ರೀತಿಯಲ್ಲಿ 86ನೇ ಅಖಿಲ ಭಾರತಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ಆಚರಿಸಲಾಗುವುದು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್‌ನಲ್ಲಿ ಸಾಹಿತ್ಯ ಸಮ್ಮೇಳನಕ್ಕೆ ₹ 20 ಕೋಟಿ ಅನುದಾನ ಘೋಷಿಸಿದ್ದಾರೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಅವರು, ‘ಸರ್ಕಾರದ ಈ ನೆರವಿನಿಂದ ಅರ್ಥಪೂರ್ಣವಾಗಿ ಸಮ್ಮೇಳನ ಆಚರಿಸಲಾಗುವುದು. ಮುಖ್ಯಮಂತ್ರಿ ಅವರು ಮತ್ತು ನಾನು ಹಾವೇರಿ ಜಿಲ್ಲೆಯವರಾಗಿದ್ದೇವೆ. ಹೀಗಾಗಿ, ಅಲ್ಲಿಐತಿಹಾಸಿಕ ದಾಖಲೆ ನಿರ್ಮಿಸಲಾಗುವುದು’ ಎಂದು ಹೇಳಿದ್ದಾರೆ.

‘ಸಾಹಿತಿಗಳಾದ ಡಾ. ಸಿದ್ಧಲಿಂಗಯ್ಯ, ಚೆನ್ನವೀರ ಕಣವಿ ಹಾಗೂ ಪ್ರೊ. ಚಂದ್ರಶೇಖರ ಪಾಟೀಲ ಅವರ ಸಾಹಿತ್ಯ ಪ್ರಚಾರಕ್ಕೆ ಸಂಬಂಧಿಸಿದಂತೆ ಪರಿಷತ್ತು ಸರ್ಕಾರಕ್ಕೆ ಈ ಹಿಂದೆ ಮನವಿ ಸಲ್ಲಿಸಿತ್ತು. ಈ ಬಗ್ಗೆಯೂ ಘೋಷಣೆಯಾಗಿರುವುದು ಸಂತಸ ನೀಡಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT