ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸಾಪ: ಚುನಾವಣಾಧಿಕಾರಿಯಾಗಿ ಗಂಗಾಧರಸ್ವಾಮಿ ನೇಮಕ

Last Updated 30 ಡಿಸೆಂಬರ್ 2020, 21:26 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿಗೆ (ಕಸಾಪ) ಚುನಾವಣೆ ನಡೆಸುವ ಸಂಬಂಧ ಸರ್ಕಾರವು ಗಂಗಾಧರಸ್ವಾಮಿ ಜಿ.ಎಂ. ಅವರನ್ನು ಚುನಾವಣಾಧಿಕಾರಿಯನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

ಪರಿಷತ್ತಿನ ಅಧ್ಯಕ್ಷರ ಅವಧಿ, ಜಿಲ್ಲಾ ಮತ್ತು ಗಡಿನಾಡ ಘಟಕಗಳ ಅಧ್ಯಕ್ಷರ ಅವಧಿ ಮುಂಬರುವ ಮಾ.2ಕ್ಕೆ ಅಂತ್ಯವಾಗಲಿದೆ. ಮಾ.3ರೊಳಗೆ ಚುನಾವಣೆ ನಡೆಸಿ, ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸುವ ಪ್ರಕ್ರಿಯೆ ನಡೆಯಬೇಕಿದೆ.

ಪರಿಷತ್ತಿನ ಚುನಾವಣೆ ಉಪನಿಬಂಧನೆ 39 ರ ಪ್ರಕಾರ ಚುನಾವಣೆಗೆ ಮೂರು ತಿಂಗಳ ಮೊದಲೇ ಸಹಾಯಕ ಕಮಿಷನರ್ ಹುದ್ದೆಗೆ ಕಡಿಮೆ ಇಲ್ಲದ ಅಧಿಕಾರಿಯನ್ನು ಚುನಾವಣಾಧಿಕಾರಿಯಾಗಿ ನೇಮಿಸಬೇಕು. ಈ ಸಂಬಂಧ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಅವರು ಕಳೆದ ತಿಂಗಳು ಸರ್ಕಾರಕ್ಕೆ ಪತ್ರ ಬರೆದಿದ್ದರು.

ಚುನಾವಣಾಧಿಕಾರಿಯು ಪರಿಷತ್ತಿನ ಉಪನಿಯಮಗಳ ಅವಕಾಶದ ಅನುಸಾರ ಚುನಾವಣೆ ಪ್ರಕ್ರಿಯೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT