ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಸಾಹಿತ್ಯ ಪರಿಷತ್‌ ಚುನಾವಣೆ: ಮತದಾನ ಪ್ರಾರಂಭ

Last Updated 21 ನವೆಂಬರ್ 2021, 3:49 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ರಾಜ್ಯಾಧ್ಯಕ್ಷ, ಜಿಲ್ಲಾ ಘಟಕಗಳ ಅಧ್ಯಕ್ಷ ಹಾಗೂ ಗಡಿನಾಡು ಘಟಕಗಳ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ಬೆಳಿಗ್ಗೆ 8 ಗಂಟೆಯಿಂದ ಮತದಾನ ಪ್ರಾರಂಭವಾಗಿದೆ.

ಪರಿಷತ್ತು ನೀಡಿರುವ ಭಾವಚಿತ್ರ ಸಹಿತ ಗುರುತಿನ ಚೀಟಿ ತರದವರಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಸರ್ಕಾರದಿಂದ ಮಾನ್ಯತೆ ಹೊಂದಿರುವ, ಭಾವಚಿತ್ರ ಇರುವ ಗುರುತಿನ ಚೀಟಿ ತೋರಿಸಿದರೂ ಮತದಾನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.
ಮತದಾನ ಮಾಡಿದವರ ಎಡಗೈ ಮಧ್ಯದ ಬೆರಳಿಗೆ ಶಾಹಿ ಹಾಕಲಾಗುತ್ತಿದೆ. ಸಂಜೆ 4 ಗಂಟೆಯವರೆಗೆ ಮತದಾನಕ್ಕೆ ಅವಕಾಶ ಇದೆ.

ಈ ಬಾರಿ 3 ಲಕ್ಷಕ್ಕೂ ಅಧಿಕ ಮಂದಿ ಮತ ಚಲಾ‌ಯಿಸಲು ಅರ್ಹರಾಗಿದ್ದಾರೆ. ರಾಜ್ಯಾಧ್ಯಕ್ಷ, ಜಿಲ್ಲಾ ಘಟಕಗಳ ಅಧ್ಯಕ್ಷ ಹಾಗೂ ಗಡಿನಾಡು ಘಟಕಗಳ ಅಧ್ಯಕ್ಷ ಸ್ಥಾನಕ್ಕೆ ಮತ ಚಲಾವಣೆ ನಡೆಯುತ್ತಿದೆ. 400ಕ್ಕೂ ಅಧಿಕ ಮತಗಟ್ಟೆಗಳನ್ನು ಗುರುತಿಸಲಾಗಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ 21 ಅಭ್ಯರ್ಥಿಗಳು ಸ್ಪರ್ಧೆಯಲ್ಲಿ ಇದ್ದಾರೆ.

ಯಾದಗಿರಿ ಜಿಲ್ಲಾ ಘಟಕ ಹಾಗೂ ತಮಿಳುನಾಡು ಗಡಿನಾಡ ಘಟಕದ ಅಧ್ಯಕ್ಷ ಸ್ಥಾನಕ್ಕೆ ತಲಾ ಒಬ್ಬರು ಮಾತ್ರ ಕಣದಲ್ಲಿದ್ದಾರೆ. ಹೀಗಾಗಿ, ಅಲ್ಲಿ ಅವಿರೋಧ ಆಯ್ಕೆ ನಡೆಯಲಿದೆ. ಗೋವಾ ಗಡಿನಾಡು ಘಟಕಕ್ಕೆ ಯಾವುದೇ ಅಭ್ಯರ್ಥಿ ಸ್ಪರ್ಧಿಸಿಲ್ಲ.

ಜಿಲ್ಲಾ ಘಟಕಗಳ ಅಧ್ಯಕ್ಷರ ಚುನಾವಣೆ ಫಲಿತಾಂಶ ಭಾನುವಾರ ಸಂಜೆಯೇ ಘೋಷಣೆ ಆಗಲಿದೆ. ಗಡಿನಾಡು ಹಾಗೂ ರಾಜ್ಯಾಧ್ಯಕ್ಷ ಸ್ಥಾನದ ಫಲಿತಾಂಶ ಇದೇ 24ಕ್ಕೆ ಘೋಷಣೆ ಆಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT