ಭಾನುವಾರ, ಸೆಪ್ಟೆಂಬರ್ 27, 2020
26 °C

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಷರತ್ತು ಕೈಬಿಡಲು ಕಸಾಪ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ಕರಡು ನಿಯಮಗಳಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಓದಿರುವ ವಿಷಯವನ್ನೇ, ಪದವಿಯಲ್ಲಿಯೂ ಐಚ್ಛಿಕ ವಿಷಯವಾಗಿ ಓದಿರಬೇಕು ಎಂಬ ಷರತ್ತನ್ನು ಕೈಬಿಡ
ಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಸರ್ಕಾರಕ್ಕೆ ಒತ್ತಾಯಿಸಿದೆ.

ಈ ಸಂಬಂಧ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಅವರು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರಿಗೆ ಪತ್ರ ಬರೆದಿದ್ದಾರೆ. 

‘ಪದವಿಯಲ್ಲಿ ಕನ್ನಡವನ್ನು ಐಚ್ಛಿಕ ವಿಷಯವನ್ನಾಗಿ ಅಭ್ಯಾಸ ಮಾಡಿರಬೇಕು ಎಂದು ವಿಧಿಸಿರುವ ಷರತ್ತಿನಿಂದ ಸಾವಿರಾರು ಮಂದಿ ಅವಕಾಶ ವಂಚಿತರಾಗಬೇಕಾಗುತ್ತದೆ. ಈ ಸಂಬಂಧ ಹಲವು ಅಭ್ಯರ್ಥಿಗಳು ಪತ್ರ ಬರೆದು, ಆತಂಕ ವ್ಯಕ್ತಪಡಿಸಿದ್ದಾರೆ. ಕನ್ನಡವನ್ನು ಓದುತ್ತಿರುವವರೇ ವಿರಳವಾಗುತ್ತಿರುವ ಈ ಸಂದರ್ಭದಲ್ಲಿ ಹೀಗೆ ನಿರ್ಬಂಧಗಳನ್ನು ವಿಧಿಸುತ್ತಾ ಹೋದಲ್ಲಿ ಈ ವಿಷಯದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆಯಲು ಯಾರೂ ಮುಂದೆ ಬರುವುದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 

‘ಪದವಿಯಲ್ಲಿ ಕನ್ನಡವನ್ನು ಐಚ್ಛಿಕ ವಿಷಯವಾಗಿ ಓದದಿದ್ದರೂ ಸ್ನಾತಕೋತ್ತರ ತರಗತಿಗಳಲ್ಲಿ ಅದೇ ವಿಷಯವನ್ನು ಆಳವಾಗಿ ಅಧ್ಯಯನ ಮಾಡುತ್ತಾರೆ. ಪಿಎಚ್‌.ಡಿ ಮಾಡಿದವರು ಹೆಚ್ಚಿನ ಅಧ್ಯಯನ ಮಾಡಿರುತ್ತಾರೆ . ಪದವಿ ಹಂತದಲ್ಲಿ ಐಚ್ಚಿಕವಾಗಿ ವಿಷಯವನ್ನು ಓದಿಲ್ಲ ಎಂಬ ಕಾರಣ ನೀಡಿ ಅವರನ್ನು ಅನರ್ಹಗೊಳಿಸುವುದು ನ್ಯಾಯವಾಗುವುದಿಲ್ಲ. ಷರತ್ತು ಕೈಬಿಡಲು ಕ್ರಮ ಕೈಗೊಳ್ಳಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು