ಶುಕ್ರವಾರ, ಮೇ 20, 2022
23 °C

ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ: ಸಚಿವ ಅರವಿಂದ ಲಿಂಬಾವಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

DH Photo

ಬೆಂಗಳೂರು: ಫೆಬ್ರವರಿ ತಿಂಗಳ ಕೊನೆಯಲ್ಲಿ ಹಾವೇರಿಯಲ್ಲಿ ನಡೆಸಲು ಉದ್ದೇಶಿಸಲಾಗಿದ್ದ 86ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

ಕನ್ನಡ ಹಬ್ಬದ ಸಿದ್ಧತೆ ಇನ್ನೂ ಪೂರ್ಣಗೊಂಡಿಲ್ಲ. ಅಲ್ಲದೆ, ಹೆಚ್ಚಿನ ಸಂಖ್ಯೆಯ ಜನರು ಸೇರುವುದರಿಂದ, ಕೋವಿಡ್ ನಿಯಮ ಪಾಲನೆ ಕಷ್ಟವಾಗಲಿದೆ. ಫೆಬ್ರವರಿ ಅಂತ್ಯದಲ್ಲಿ ಕೋವಿಡ್ ಹೊಸ ನಿಯಮಾವಳಿ ಜಾರಿಗೆ ಬಂದ ಬಳಿಕ ಮಾರ್ಚ್ 9ಕ್ಕೆ ಮತ್ತೊಂದು ಸಭೆ ನಡೆಸಿ, ಸಮ್ಮೇಳನ ದಿನಾಂಕ ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಈ ಸಂಬಂಧ ಸಚಿವರು, ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಸಿದ್ದಾರೆ. ಹಾವೇರಿಯಲ್ಲಿ 86ನೇ ಕನ್ನಡ ಸಮ್ಮೇಳನ ನಡೆಯಲಿದ್ದು, ಸಾಹಿತಿ ದೊಡ್ಡರಂಗೇಗೌಡರು ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.

ಶುಕ್ರವಾರ ನಡೆದ ಸಭೆಯಲ್ಲಿ ಸಚಿವರಾದ ಬಸವರಾಜ ಬೊಮ್ಮಾಯಿ, ಬಿ. ಸಿ. ಪಾಟೀಲ್ ಮತ್ತು ಆರ್. ಶಂಕರ್ ಭಾಗವಹಿಸಿದ್ದರು. ಜತೆಗೆ ಶಾಸಕ ನೆಹರು ಓಲೇಕಾರ್, ಕಸಾಪ ಅಧ್ಯಕ್ಷ ಡಾ. ಮನು ಬಳಿಗಾರ್ ಮತ್ತು ಹಾವೇರಿ ಜಿಲ್ಲಾಡಳಿತದ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು