ಬೆಂಗಳೂರು: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲಿ ಜನವರಿ 6, 7 ಮತ್ತು 8ರಂದು ನಡೆಯಲಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ಕುಮಾರ್ ಚರ್ಚಿಸಿದ ಬಳಿಕ ದಿನಾಂಕ ನಿಗದಿಪಡಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಈ ಹಿಂದೆ ನ. 11, 12 ಮತ್ತು 13ರಂದು ಸಮ್ಮೇಳನ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಮತ್ತು ಸಮ್ಮೇಳನಕ್ಕೆ ಅಗತ್ಯವಾದ ಸಿದ್ಧತೆ ಆಗದ ಕಾರಣ ಇದೀಗ ಸಮ್ಮೇಳನವನ್ನು ಮುಂದೂಡಿಕೆ ಮಾಡಲಾಗಿದೆ.
ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಜುಲೈನಲ್ಲಿ ನಡೆಸಿದ್ದ ಪೂರ್ವಭಾವಿ ಸಭೆಯಲ್ಲಿ ಸೆ. 23, 24, 25ರಂದು ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿತ್ತು. ಈ ದಿನಗಳಲ್ಲಿ ಪಿತೃಪಕ್ಷ ಎಂಬ ಕಾರಣಕ್ಕೆ ನ. 11, 12 ಮತ್ತು 13ರಂದು ಸಮ್ಮೇಳನ ನಡೆಸಲು ದಿನಾಂಕ ಮರು ನಿಗದಿಪಡಿಸಿ ಮುಖ್ಯಮಂತ್ರಿ ಪ್ರಕಟಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.