ಗುರುವಾರ , ಡಿಸೆಂಬರ್ 1, 2022
20 °C

ವೆಂಕಟೇಶಮೂರ್ತಿಗೆ ‘ಕನ್ನಡ ಸಾಹಿತ್ಯ ಸೇವಾ ಪ್ರಶಸ್ತಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮೈಕೊ ಕನ್ನಡ ಬಳಗದ ವತಿಯಿಂದ ನೀಡಲಾಗುವ ‘ರಾಬರ್ಟ್‌ ಬಾಷ್‌ ಕನ್ನಡ ಸಾಹಿತ್ಯ ಸೇವಾ ಪ್ರಶಸ್ತಿ’ಗೆ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ₹1 ಲಕ್ಷ ನಗದು ಒಳ ಗೊಂಡಿದೆ. ಅಕ್ಟೋಬರ್‌ 2ರಂದು ಆನಂದ ರಾವ್ ವೃತ್ತದಲ್ಲಿರುವ ಜಗ ದ್ಗುರು ರೇಣುಕಾಚಾರ್ಯ ಕಾಲೇಜಿನ ಎಸ್.ಜೆ.ಆರ್.ಸಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ. ಪ್ರಕಾಶ ಮೂರ್ತಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬಾಷ್ ವಾಣಿಜ್ಯ ಅಧಿಕಾರಿಗಳಾದ ಎಚ್.ಬಿ. ತೋಂಟೇಶ್, ಕಾರ್ಮಿಕ ಸಂಘದ ಅಧ್ಯಕ್ಷ ವಿ.ಜೆ.ಕೆ. ನಾಯರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು