ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕನ್ನಡಕ್ಕಾಗಿ ನಾವು’ ಅಭಿಯಾನ: 5 ಲಕ್ಷ ಜನರಿಂದ ಕನ್ನಡ ಗೀತ ಗಾಯನ!

ನಾಳೆ ಬೆಳಿಗ್ಗೆ 11 ಗಂಟೆಗೆ ರಾಜ್ಯಾದ್ಯಂತ ಗಾಯನ
Last Updated 26 ಅಕ್ಟೋಬರ್ 2021, 19:21 IST
ಅಕ್ಷರ ಗಾತ್ರ

ಬೆಂಗಳೂರು: ‘ಕನ್ನಡಕ್ಕಾಗಿ ನಾವು’ ಅಭಿಯಾನದ ಅಂಗವಾಗಿ ಇದೇ 28 ರಂದು ನಡೆಯಲಿರುವ ಸಾಮೂಹಿಕ ಕನ್ನಡ ಗೀತೆಗಳ ಗಾಯನದಲ್ಲಿ 5 ಲಕ್ಷ ಜನ ಭಾಗವಹಿಸಲಿದ್ದಾರೆ.

ರಾಜ್ಯದ ಎಲ್ಲ 31 ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒಗಳ ಜತೆ ಚರ್ಚಿಸಿ ಇದಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸುಮಾರು 1,000 ಕ್ಕೂ ಹೆಚ್ಚು ಸ್ಥಳಗಳಲ್ಲಿ ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 11.00 ಕ್ಕೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾತ್ರವಲ್ಲದೇ, ಕನ್ನಡ ನಾಡಿನ ಎಲ್ಲ ವರ್ಗದ ಜನರೂ ಭಾಗವಹಿಸುತ್ತಾರೆ. ದೇಶದ ಇತರ ರಾಜ್ಯಗಳು ಮತ್ತು ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರು, ಕನ್ನಡ ಕೂಟಗಳು ಸಹ ಕನ್ನಡ ಗೀತೆಗಳನ್ನು ಹಾಡಲಿದ್ದಾರೆ. ಇವರಿಗಾಗಿ ಒದಗಿಸಿರುವ ನಿರ್ದಿಷ್ಟ ಜಾಲತಾಣ ಸಂಪರ್ಕದ ಮೂಲಕ ಒಟ್ಟಿಗೆ ಹಾಡುವ ತಾಂತ್ರಿಕ ಸಂಯೋಜನೆ ರೂಪಿಸಲಾಗಿದೆ ಎಂದು ಅವರು ಹೇಳಿದರು.

ನಾಡಿನ ಎಲ್ಲ ಸರ್ಕಾರಿ ಕಚೇರಿಗಳು, ಶಾಲಾ–ಕಾಲೇಜುಗಳ ಆವರಣ, ವಿಶ್ವವಿದ್ಯಾಲಯಗಳ ಆವರಣ, ತಾಂತ್ರಿಕ ಮತ್ತು ವೈದ್ಯಕೀಯ ವಿಶ್ವವಿದ್ಯಾಲಯಗಳ ಆವರಣ, ಮೈಸೂರು ಅರಮನೆ ಮುಂಭಾಗ, ಹಂಪಿಯ ಕಲ್ಲಿನ ರಥ, ಮಹಾನವಮಿ ದಿಬ್ಬ ಸೇರಿ ವಿವಿಧ ಜಿಲ್ಲೆಗಳ ಪ್ರಸಿದ್ಧ ಸ್ಮಾರಕಗಳ ಮುಂದೆ ಒಟ್ಟಿಗೆ ನಿಂತು ಗಾಯನ ಮಾಡಲಾಗುತ್ತದೆ ಎಂದರು.

ಅಲ್ಲದೆ, ರಾಜ್ಯದ ಎಲ್ಲ ದೊಡ್ಡ ಮಾರುಕಟ್ಟೆಗಳು, ಆಟೋರಿಕ್ಷಾ ನಿಲ್ದಾಣಗಳು, ಕೈಗಾರಿಕಾ ಪ್ರದೇಶಗಳು ಮತ್ತು ಜನನಿಬಿಡ ಸ್ಥಳಗಳಲ್ಲಿ ಗೀತ ಗಾಯನ ನಡೆಯಲಿದೆ. ದೊಡ್ಡ ಸಂಖ್ಯೆಯ ಜನ ಸೇರುವ ಸ್ಥಳಗಳಲ್ಲಿ ಗೀತೆಗಳ ಧಾಟಿಯನ್ನು ಕಲಿಸಲು ಪರಿಣಿತ ಸಂಗೀತ ಗಾಯಕರನ್ನು ನಿಯೋಜಿಸಲಾಗಿದೆ ಎಂದು ಸುನಿಲ್‌ ಕುಮಾರ್‌ ಹೇಳಿದರು.

ಇನ್ನು ಎಲ್ಲೆಲ್ಲಿ ಗಾಯನ

l ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ಮಂಗಳೂರು ಮತ್ತು ಹುಬ್ಬಳ್ಳಿ ವಿಮಾನ ನಿಲ್ದಾಣಗಳು

lಬೆಂಗಳೂರು ಮೆಟ್ರೊದ ಎಲ್ಲ ರೈಲುಗಳಲ್ಲಿ ಬೆಳಿಗ್ಗೆ 11 ಗಂಟೆಗೆ ಸುಗಮ ಸಂಗೀತ ಗಾಯನ ತಂಡಗಳು ಮೂರು ಗೀತೆಗಳನ್ನು ಹಾಡುತ್ತವೆ. ಮೆಟ್ರೊದ ಎಲ್ಲ 51 ನಿಲ್ದಾಣಗಳಲ್ಲಿ ಕನ್ನಡ ಗೀತೆಗಳ ಗಾಯನ ಧ್ವನಿ ವರ್ಧಕಗಳ ಮೂಲಕ ಪ್ರಸಾರವಾಗಲಿದೆ. ಅಲ್ಲದೆ, ಅತ್ಯಂತ ಜನನಿಬಿಡ 5 ಮೆಟ್ರೊ ನಿಲ್ದಾಣಗಳಲ್ಲಿ ಸಾಮೂ
ಹಿಕ ಗೀತೆಗಾಯನ ನಡೆಯಲಿದೆ.

lವಿಧಾನಸೌಧದ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿ, ಸರ್ಕಾರದ ಮುಖ್ಯಕಾರ್ಯದರ್ಶಿ ಮತ್ತು ಸಚಿವ ವಿ.ಸುನಿಲ್‌ ಕುಮಾರ್‌, ಅಧಿಕಾರಿಗಳು, ಸಿಬ್ಬಂದಿ ಸೇರಿ 3 ಸಾವಿರ ಮಂದಿ ಭಾಗವಹಿಸುವರು.

lಜೋಗ ಜಲಪಾತದ ಮುಂದೆ, ಕುಪ್ಪಳಿಯ ಕವಿಶೈಲ, ಚಿತ್ರದುರ್ಗದ ಕೋಟೆ, ಮಂಗಳೂರಿನ ಕಡಲ ಕಿನಾರೆ, ಉಡುಪಿಯ ಶ್ರೀಕೃಷ್ಣ ದೇಗುಲ, ಮೂಡಬಿದಿರೆಯ ಸಾವಿರ ಕಂಬದ ಬಸದಿ, ಮಂಗಳೂರು ಬಂದರಿನ ಮೀನುಗಾರರ ಮಧ್ಯೆ

lಸಿದ್ಧಗಂಗಾ ಮಠದ ಆವರಣ, ಶ್ರೀರಂಗಪಟ್ಟಣದ ಶ್ರೀರಂಗನಾಥಸ್ವಾಮಿ ದೇಗುಲ, ಭಾಗಮಂಡಲ, ಬೀದರ್‌ನ ಗೋಳ ಗುಮ್ಮಟ, ಬೇಲೂರು, ಹಳೇ
ಬೀಡು, ಶ್ರವಣಬೆಳಗೊಳ, ಕನ್ನಡದ ಮೊದಲ ಶಾಸನ ದೊರೆತ ಹಲ್ಮಿಡಿ ಗ್ರಾಮ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT