ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐವರಿಗೆ ಕಾಂತಾವರ ಕನ್ನಡ ಸಂಘದ ಪ್ರಶಸ್ತಿ

Last Updated 17 ಅಕ್ಟೋಬರ್ 2022, 12:55 IST
ಅಕ್ಷರ ಗಾತ್ರ

ಕಾಂತಾವರ (ಉಡುಪಿ ಜಿಲ್ಲೆ): ಕಾಂತಾವರ ಕನ್ನಡ ಸಂಘದ ಐದು ಪ್ರಶಸ್ತಿಗಳಿಗೆ ಸಾಧಕರನ್ನು ಆಯ್ಕೆಮಾಡಲಾಗಿದೆ.

ಬಾಲಕೃಷ್ಣ ಆಚಾರ್ ಮತ್ತು ಅವರ ಪತ್ನಿ ವಾಣಿ ಬಿ.ಆಚಾರ್ ಅವರು ಸ್ಥಾಪಿಸಿರುವ ದತ್ತಿನಿಧಿಯಿಂದ ಕೊಡಲಾಗುವ ‘ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ’ಯನ್ನು ಯಕ್ಷಗಾನದ ಅರ್ಥದಾರಿ, ಪ್ರಸಂಗಕರ್ತ ಶ್ರೀಧರ ಡಿ.ಎಸ್ ಅವರಿಗೆ, ಹಿರಿಯ ರಂಗಕರ್ಮಿ ಶ್ರೀಪತಿ ಮಂಜನಬೈಲ್ ಅವರು ಸ್ಥಾಪಿಸಿರುವ ದತ್ತಿನಿಧಿಯಿಂದ ಕೊಡಲಾಗುವ ‘ಮಂಜನಬೈಲ್ ರಂಗ ಸನ್ಮಾನ್’ ಪ್ರಶಸ್ತಿಯನ್ನು ಧಾರವಾಡದ ಹಿರಿಯ ರಂಗಕರ್ಮಿ ಹರ್ಷವರ್ಧನ ಹನುಮಂತರಾವ್ ಡಂಬಳ ಅವರಿಗೆ ನೀಡಲು ನಿರ್ಣಯಿಸಲಾಗಿದೆ.

ಡಾ.ನಾ. ಮೊಗಸಾಲೆ ಕುಟುಂಬದವರು ಸ್ಥಾಪಿಸಿದ ದತ್ತಿನಿಧಿಯಿಂದ ಕೊಡಲಾಗುವ ‘ಕಾಂತಾವರ ಸಾಹಿತ್ಯ ಪ್ರಶಸ್ತಿ’ಯನ್ನು ಮೂಡುಬಿದಿರೆಯ ಸಂಶೋಧಕ ಡಾ. ಪುಂಡಿಕಾಯ್ ಗಣಪಯ್ಯ ಭಟ್ ಅವರಿಗೆ, ಸರೋಜಿನಿ ನಾಗಪ್ಪಯ್ಯ ಈಶ್ವರ ಮಂಗಲ ಅವರ ದತ್ತಿನಿಧಿಯ ‘ಕಾಂತಾವರ ಸಾಹಿತ್ಯ ವಿಮರ್ಶಾ’ ಪ್ರಶಸ್ತಿಯನ್ನು ಸಾಹಿತ್ಯ ವಿಮರ್ಶೆ, ಸಂಶೋಧನೆಯಲ್ಲಿ ತೊಡಗಿಸಿಕೊಂಡಿರುವ ಡಾ.ಸುಭಾಷ್ ರಾಜಮಾನೆ ಅವರಿಗೆ ನೀಡಲಾಗಿದೆ.

ಪ್ರಶಸ್ತಿಗಳು ತಲಾ ₹10 ಸಾವಿರ ಗೌರವ ಸಂಭಾವನೆ, ತಾಮ್ರ ಪತ್ರ ಮತ್ತು ಸನ್ಮಾನ ಒಳಗೊಂಡಿವೆ.

ಬೆಂಗಳೂರಿನ ಕೆ. ಚಂದ್ರಮೌಳಿ ಅವರಿಗೆ ಸಂಘದ ಪ್ರತಿಷ್ಠಿತ ‘ವಾರ್ಷಿಕ ಗೌರವ ಪ್ರಶಸ್ತಿ’ಯನ್ನು ನೀಡಲಾಗುವುದು.

ನವೆಂಬರ್‌ 1ರಂದು ನಡೆಯುವ ‘ಕಾಂತಾವರ ಉತ್ಸವ’ದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸದಾನಂದ ನಾರಾವಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT