ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆರಂಜೆ ಕೃಷ್ಣ ಭಟ್ ಸೇರಿ ಮೂವರಿಗೆ ಕಾಂತಾವರ ಕನ್ನಡ ಸಂಘದ ದತ್ತಿನಿಧಿ ಪ್ರಶಸ್ತಿ

Last Updated 8 ಸೆಪ್ಟೆಂಬರ್ 2021, 2:01 IST
ಅಕ್ಷರ ಗಾತ್ರ

ಮೂಡುಬಿದಿರೆ: ಉಡುಪಿಯ ‘ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ’ದ ಮಾಜಿ ನಿರ್ದೇಶಕ ಪ್ರೊ. ಹೆರಂಜೆ ಕೃಷ್ಣ ಭಟ್ ಸೇರಿದಂತೆ ಮೂವರಿಗೆ ಕಾಂತಾವರ ಕನ್ನಡ ಸಂಘದ 2021ನೇ ಸಾಲಿನ ದತ್ತಿನಿಧಿ ಪ್ರಶಸ್ತಿ ಘೋಷಿಸಲಾಗಿದೆ.

ಸರಸ್ವತಿ ಬಲ್ಲಾಳ್ ಮತ್ತು ಡಾ.ಸಿ.ಕೆ. ಬಲ್ಲಾಳ್ ದಂಪತಿ ಪ್ರತಿಷ್ಠಾನದಿಂದ ನೀಡುವ ಕರ್ನಾಟಕ ಏಕೀಕರಣದ ನೇತಾರ ಕೆ.ಬಿ. ಜಿನರಾಜ ಹೆಗ್ಡೆ ಸ್ಮಾರಕ ಸಾಂಸ್ಕೃತಿಕ ಪ್ರಶಸ್ತಿಗೆ ಪ್ರೊ. ಹೆರಂಜೆ ಕೃಷ್ಣ ಭಟ್ ಅವರನ್ನು ಆಯ್ಕೆ ಮಾಡಲಾಗಿದೆ.

ಮೊಗಸಾಲೆ ಪ್ರತಿಷ್ಠಾನವು ನೀಡುವ ‘ಕಾಂತಾವರ ಸಾಹಿತ್ಯ ಪುರಸ್ಕಾರ’ವನ್ನು ನಿವೃತ್ತ ಪ್ರಾಧ್ಯಾಪಕ ಮತ್ತು ಸಾಹಿತಿ ಉದಯ ಕುಮಾರ್ ಹಬ್ಬು ಅವರಿಗೆ ಮತ್ತು ಕಾಂತಾವರ ಸರೋಜಿನಿ ನಾಗಪ್ಪಯ್ಯ ಈಶ್ವರಮಂಗಲ ದಂಪತಿ ಪ್ರತಿಷ್ಠಾನದಿಂದ ನೀಡುವ ‘ಮಾಧ್ಯಮ ಸಾಹಿತ್ಯ ಪ್ರಶಸ್ತಿ’ಯನ್ನು ಲೇಖಕ ಕೋಟ ಶಿವಾನಂದ ಕಾರಂತ ಅವರಿಗೆ ನೀಡಲು ನಿರ್ಧರಿಸಲಾಗಿದೆ.

ಕನ್ನಡ ಸಂಘದ ಸ್ಥಾಪಕ ಅಧ್ಯಕ್ಷ ಡಾ.ನಾ. ಮೊಗಸಾಲೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ತಲಾ ₹10 ಸಾವಿರ ಗೌರವಧನ, ತಾಮ್ರ ಪತ್ರ ಮತ್ತು ಸನ್ಮಾನ ಪತ್ರ ಒಳಗೊಂಡಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸದಾನಂದ ನಾರಾವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT