ಕಣ್ವ ಬ್ಯಾಂಕ್: ₹84.40 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಬೆಂಗಳೂರು: ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನದಲ್ಲಿರುವ ಕಣ್ವ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸಂಸ್ಥಾಪಕ ಅಧ್ಯಕ್ಷ ಎನ್.ನಂಜುಂಡಯ್ಯ ಮತ್ತು ಸ್ಥಾಪಕ ನಿರ್ದೇಶಕ ಹರೀಶ್ ಕುಟುಂಬಗಳಿಗೆ ಸೇರಿದ ₹84.40 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ(ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ. ಈ ಪ್ರಕರಣದಲ್ಲಿ ಇ.ಡಿ ಈವರೆಗೆ ಜಪ್ತಿ ಮಾಡಿದ ಒಟ್ಟು ಆಸ್ತಿ ಮೌಲ್ಯ ₹339.57 ಕೋಟಿ ಆಗಿದೆ.
ನೆಲಮಂಗಲ, ಕೊರಟಗೆರೆ, ಚಿಕ್ಕಬಳ್ಳಾಪುರ, ಶ್ರೀರಂಗಪಟ್ಟಣ, ಬೆಂಗಳೂರು ಮತ್ತು ಆಂಧ್ರಪ್ರದೇಶದ ಮಡಕಾಶಿರದಲ್ಲಿ ಕೃಷಿ, ಕೃಷಿಯೇತರ ಭೂಮಿ, ಕಟ್ಟಡಗಳು, ವಸತಿ ಫ್ಲಾಟ್, ಕಾರ್ಖಾನೆಗಳನ್ನು ಒಳಗೊಂಡ ಸ್ಥಿರಾಸ್ತಿಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಪ್ರಕಾರ ವಶಕ್ಕೆ ಪಡೆಯಲು ಇ.ಡಿ ಆದೇಶಿಸಿದೆ. ಈ ಹಿಂದೆ ₹255.17 ಕೋಟಿ ಮೌಲ್ಯದ ಸ್ವತ್ತನ್ನು ಜಪ್ತಿ ಮಾಡಿತ್ತು. ಹೆಚ್ಚಿನ ಬಡ್ಡಿದರದ ಆಮಿಷ ಒಡ್ಡಿ ಏಜೆಂಟ್‌ಗಳ ಮೂಲಕ ₹650 ಕೋಟಿ ಸಂಗ್ರಹಿಸಿ ಮೋಸ ಮಾಡಿದ್ದ ಆರೋಪದಲ್ಲಿ ಬಸವೇಶ್ವರ
ನಗರ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.