ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರಾಕಾರ ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್‌’

Last Updated 14 ನವೆಂಬರ್ 2021, 20:18 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕರಾವಳಿ ಭಾಗದಲ್ಲಿ ಮಳೆ ಮುಂದುವರಿದಿದ್ದು, ನ.15ರಿಂದ 17ರವರೆಗೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಭಾಗದಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯ ಸಾಧ್ಯತೆ ಇರುವುದರಿಂದ ನ.15ರಂದು ‘ಆರೆಂಜ್‌ ಅಲರ್ಟ್‌’ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಮಳೆಯಾಗುವ ಸೂಚನೆಗಳಿರುವುದರಿಂದ ‘ಯೆಲ್ಲೊ ಅಲರ್ಟ್‌’ ನೀಡಲಾಗಿದೆ.

‘ಅಂಡಮಾನ್‌ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದ ಪರಿಣಾಮ ಮುಂದುವರಿದಿದೆ. ಹಾಗಾಗಿ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳವರೆಗೆ ಮಳೆಯಾಗಲಿದೆ. ಇದೇ 18ರ ನಂತರ ರಾಜ್ಯದಲ್ಲಿ ಮಳೆ ತಗ್ಗಲಿದೆ’ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಮಳೆ–ಎಲ್ಲಿ, ಎಷ್ಟು?: ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಭಾನುವಾರ 19 ಸೆಂ.ಮೀನಷ್ಟು ಗರಿಷ್ಠ ಮಳೆಯಾಗಿದೆ. ಧರ್ಮಸ್ಥಳ 14, ಶ್ರೀರಂಗಪಟ್ಟಣ 9, ಬೆಳ್ತಂಗಡಿ 6, ಮೈಸೂರು 5, ಪುತ್ತೂರು, ಹಾಸನ, ಪಾವಗಡ 4, ಚಿಂಚೋಳಿ, ತೀರ್ಥಹಳ್ಳಿ, ಸೊರಬ, ಮದ್ದೂರು, ಮಳವಳ್ಳಿ, ನಂಜನಗೂಡು 3, ಕಾರ್ಕಳ, ಚಿಕ್ಕಮಗಳೂರು, ಮಂಡ್ಯ, ಗಂಗಾವತಿ, ಹಿರಿಯೂರು, ಮಡಿಕೇರಿ, ಅರಕಲಗೂಡು, ನೆಲಮಂಗಲ 2, ಮೂಡುಬಿದರೆ, ಗದಗ, ಚಿಂತಾಮಣಿ, ತಿಪಟೂರು, ಕೊಳ್ಳೇಗಾಲದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ದಾವಣಗೆರೆಯಲ್ಲಿ 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT