ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಠ್ಯ ಹಿಂಪಡೆಯದಿದ್ದರೆ ಪರಿಸ್ಥಿತಿ ಕೈಮೀರಲಿದೆ: ಸರ್ಕಾರಕ್ಕೆ ನಾರಾಯಣಗೌಡ ಎಚ್ಚರಿಕೆ

Last Updated 17 ಜೂನ್ 2022, 15:50 IST
ಅಕ್ಷರ ಗಾತ್ರ

ಬೆಂಗಳೂರು:‘ಸರ್ಕಾರವು ಪರಿಷ್ಕೃತ ಶಾಲಾ ಪಠ್ಯಗಳನ್ನುಹಿಂದಕ್ಕೆ ಪಡೆಯದಿದ್ದರೆ ಪರಿಸ್ಥಿತಿ ಕೈಮೀರುವುದು ಖಚಿತ’ ಎಂದುಕರ್ನಾಟಕ‌ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷಟಿ.ಎ. ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.‌

‘ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಹಲವಾರು ಮಹಾಮಹಿಮರಿಗೆ, ದಾರ್ಶನಿಕರಿಗೆ ಅಪಮಾನಗಳಾಗಿವೆ. ರಾಜ್ಯದ ಅಸ್ಮಿತೆಗೆ ಧಕ್ಕೆ ತಂದಿರುವ ಪರಿಷ್ಕೃತ ಪಠ್ಯವನ್ನು ಹಿಂದಕ್ಕೆ ಪಡೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದೇವೆ. ಕೂಡಲೇ ಪರಿಷ್ಕೃತ ಪಠ್ಯವನ್ನು ಸರ್ಕಾರ ಹಿಂದಕ್ಕೆ ಪಡೆಯಬೇಕು. ಇಲ್ಲವಾದಲ್ಲಿಇಡೀ ರಾಜ್ಯದ ಶಾಂತಿ ಕದಡಿ ಹೋಗುತ್ತದೆ. ಅದರ ಹೊಣೆಯನ್ನು ಸರ್ಕಾರವೇ ಹೊರಬೇಕಾಗುತ್ತದೆ. ಜನರನ್ನು ಎದುರುಹಾಕಿಕೊಂಡ ಸರ್ಕಾರಗಳು ಉಳಿಯುವುದಿಲ್ಲ’ ಎಂದು ತಿಳಿಸಿದ್ದಾರೆ.

‘ಮುಖ್ಯಮಂತ್ರಿ ಜನರ ಅಹವಾಲಿಗೆ ಕಿವಿಗೊಡಬೇಕು. ಪ್ರಜಾಪ್ರಭುತ್ವದಲ್ಲಿ ಜನರೇ ದೊರೆಗಳು. ಸಂವಿಧಾನೇತರ ಶಕ್ತಿಗಳು ಸರ್ಕಾರವನ್ನು ನಿಯಂತ್ರಿಸಬಾರದು. ನಾಡಿನಾದ್ಯಂತ ಪ್ರಜ್ಞಾವಂತ ಜನರು ಬೀದಿಗಿಳಿದು ಹೋರಾಡುತ್ತಿದ್ದಾರೆ. ಅವರ ಧ್ವನಿಯನ್ನು ಸರ್ಕಾರ ಗುರುತಿಸಬೇಕು.ಬಸವಣ್ಣ, ಅಲ್ಲಮಪ್ರಭು, ವಾಲ್ಮೀಕಿ, ಕನಕದಾಸ, ಪುರಂದರದಾಸ, ಶಂಕರಾಚಾರ್ಯ, ಶಿಶುನಾಳ ಶರೀಫ, ಕುವೆಂಪು ಮೊದಲಾದ ದಾರ್ಶನಿಕರು, ಸಂತರನ್ನು ಪರಿಷ್ಕೃತ ಪಠ್ಯದಲ್ಲಿ ಅಪಮಾನಿಸಲಾಗಿದೆ. ಕನ್ನಡತನ, ಕನ್ನಡಾಭಿಮಾನಕ್ಕೆ ಕುತ್ತು ತರಲಾಗಿದೆ. ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT