ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಿನ ಪೂರ್ಣ ಬಳಕೆಗೆ ಕಾರಜೋಳ ಸೂಚನೆ

Last Updated 9 ಆಗಸ್ಟ್ 2021, 17:25 IST
ಅಕ್ಷರ ಗಾತ್ರ

ಬೆಂಗಳೂರು: ನದಿ ಕಣಿವೆ ಪ್ರದೇಶಗಳಲ್ಲಿ ರಾಜ್ಯಕ್ಕೆ ಹಂಚಿಕೆಯಾಗಿರುವ ನೀರಿನ ಪಾಲನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳುವುದಕ್ಕೆ ಪೂರಕವಾಗಿ ಯೋಜನೆಗಳನ್ನು ರೂಪಿಸಬೇಕು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಅವರು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಕಾವೇರಿ ನೀರಾವರಿ ನಿಗಮದ ಕಚೇರಿಯಲ್ಲಿ ಸೋಮವಾರ ಜಲ ಸಂಪನ್ಮೂಲ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ‘ರಾಜ್ಯದಲ್ಲಿ 1.4 ಕೋಟಿ ಹೆಕ್ಟೇರ್‌ ಕೃಷಿ ಯೋಗ್ಯ ಜಮೀನು ಇದೆ. ಈ ಪೈಕಿ 40.66 ಲಕ್ಷ ಹೆಕ್ಟೇರ್‌ ಪ್ರದೇಶವು ಜಲ ಸಂಪನ್ಮೂಲ ಇಲಾಖೆಯ ಯೋಜಿತ ನೀರಾವರಿ ವಲಯದಲ್ಲಿದೆ. ಈವರೆಗೆ 29.18 ಲಕ್ಷ ಹೆಕ್ಟೇರ್‌ ಜಮೀನಿಗೆ ಮಾತ್ರ ನೀರಾವರಿ ಒದಗಿಸಲಾಗಿದೆ. ಉಳಿದ ಪ್ರದೇಶಕ್ಕೂ ನೀರಾವರಿ ಸೌಲಭ್ಯ ವಿಸ್ತರಿಸಲು ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

ಪ್ರಸಕ್ತ ವರ್ಷ ಜಲ ಸಂಪನ್ಮೂಲ ಇಲಾಖೆಗೆ ₹18,702 ಕೋಟಿ ಅನುದಾನ ಒದಗಿಸಲಾಗಿದೆ. ಜುಲೈ ಅಂತ್ಯದವರೆಗೆ ₹ 5,053 ಕೋಟಿ ಬಳಕೆಯಾಗಿದೆ. ಅನುದಾನ ಬಳಕೆಯಲ್ಲಿ ಪೂರ್ಣ ಪ್ರಮಾಣದ ಗುರಿ ಸಾಧಿಸಬೇಕು. ಕಾಮಗಾರಿಗಳಿಗೆ ಅಡ್ಡಿಯಾಗಿರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸಚಿವರು ತಿಳಿಸಿದರು.

ಜಲ ಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಕಾರ್ಯದರ್ಶಿ ಲಕ್ಷ್ಮಣರಾವ್‌ ಪೇಶ್ವೆ, ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ, ಕೃಷ್ಣ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರಭಾಕರ ಚಿಣಿ, ಪ್ರಧಾನ ಎಂಜಿನಿಯರ್‌ ಸಿದ್ದಗಂಗಪ್ಪ ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT