ಬೆಂಗಳೂರು: ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್–19 ದೃಢಪಟ್ಟ 1,386 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಕೊರೊನಾ ಸೋಂಕಿನ ಕಾರಣಗಳಿಂದಾಗಿ 61 ಮಂದಿ ಸಾವಿಗೀಡಾಗಿರುವುದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಿಂದ ತಿಳಿದು ಬಂದಿದೆ.
ಒಟ್ಟು 28,72,684 ಪ್ರಕರಣಗಳ ಪೈಕಿ 28,01,907 ಮಂದಿ ಗುಣಮುಖರಾಗಿದ್ದಾರೆ ಹಾಗೂ 35,896 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ 34,858 ಪ್ರಕರಣಗಳು ಸಕ್ರಿಯವಾಗಿವೆ.
24 ಗಂಟೆಗಳಲ್ಲಿ 3,204 ಮಂದಿ ಚೇತರಿಸಿಕೊಂಡಿದ್ದಾರೆ. ಖಚಿತ ಪ್ರಕರಣಗಳ ಪ್ರಮಾಣ ಶೇ.1.26 ರಷ್ಟು ಹಾಗೂ ಮೃತರ ಪ್ರಮಾಣ ಶೇ. 4.40ರಷ್ಟು ದಾಖಲಾಗಿದೆ.
ಬೆಂಗಳೂರಿನಲ್ಲಿ 319 ಪ್ರಕರಣಗಳು, ಮೈಸೂರಿನಲ್ಲಿ 177 ಪ್ರಕರಣಗಳು, ದಕ್ಷಿಣ ಕನ್ನಡದಲ್ಲಿ 126, ಹಾಸನದಲ್ಲಿ 108 ಹಾಗೂ ಕೊಡಗಿನಲ್ಲಿ 73 ಹೊಸ ಪ್ರಕರಣಗಳು ವರದಿಯಾಗಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.