ಬೆಂಗಳೂರು: ಇದೇ 28ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ.

‘ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಾರ್ಷಿಕ ಪರೀಕ್ಷೆಗಳು ಮುಗಿದ ತಕ್ಷಣ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

‘ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಪೋಷಕರು ಮತ್ತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಬಳಿಕ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಪರೀಕ್ಷೆ ಮುಂದೂಡಿರುವ ಕಾರಣ ವಿದ್ಯಾರ್ಥಿಗಳು ವಿಚಲಿತರಾಗುವ ಅಗತ್ಯ ಇಲ್ಲ. ಏಕಾಗ್ರತೆಯಿಂದ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ ಮುಂದುವರೆಸಬೇಕು’ ಎಂದು ಅವರು ಕಿವಿಮಾತು ಹೇಳಿದ್ದಾರೆ.

‘ಕೋವಿಡ್ ತೀವ್ರವಾಗಿ ಹರಡುತ್ತಿರುವ ಸಂದರ್ಭದಲ್ಲಿ ಒಂದೇ ಪ್ರಯೋಗಾಲಯದಲ್ಲಿ ಹಲವು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆ ನಡೆಸುವುದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅವೈಜ್ಞಾನಿಕ ನಿರ್ಧಾರವಾಗಿತ್ತು. ಪರೀಕ್ಷೆ ಮುಂದೂಡಿರುವುದು ಸೂಕ್ತವಾಗಿದೆ’ ಎಂದು ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಹೇಳಿದೆ.

ಇದನ್ನೂ ಓದಿ... ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ಗೆ ಸೂಚಿಸಿದ್ದೇಕೆ?: ಸರ್ಕಾರದ ಸ್ಪಷ್ಟನೆ ಹೀಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.