ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ರಾಜ್ಯದಲ್ಲಿ 380 ಹೊಸ ಪ್ರಕರಣಗಳು

Last Updated 12 ಫೆಬ್ರುವರಿ 2021, 14:50 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 380 ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 8 ಜನರು ಸಾವಿಗೀಡಾಗಿದ್ದಾರೆ.

ಒಟ್ಟು ಪ್ರಕರಣಗಳ ಸಂಖ್ಯೆ 9,44,437 ಮುಟ್ಟಿದ್ದು, ಈ ಪೈಕಿ 9,26,234 ಜನರು ಗುಣಮುಖರಾಗಿದ್ದಾರೆ. ಈವರೆಗೂ 12,259 ಮಂದಿ ಕೋವಿಡ್‌–19ನಿಂದ ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಶುಕ್ರವಾರ 405 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ 5,925 ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ 194, ದಕ್ಷಿಣ ಕನ್ನಡದಲ್ಲಿ 33, ಮೈಸೂರಿನಲ್ಲಿ 31, ಉಡುಪಿಯಲ್ಲಿ 13, ಕಲಬುರ್ಗಿಯಲ್ಲಿ 12 ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT