ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂಕ್ಷ್ಮ ನೀರಾವರಿಗೆ ಸಬ್ಸಿಡಿ: ಬಿ.ಸಿ.ಪಾಟೀಲ

Last Updated 16 ಜುಲೈ 2021, 19:56 IST
ಅಕ್ಷರ ಗಾತ್ರ

ಬೆಂಗಳೂರು: ‘ಮುಖ್ಯಮಂತ್ರಿಗಳ ಸೂಕ್ಷ್ಮ ನೀರಾವರಿ ಯೋಜನೆ’ಯಡಿ ಎಲ್ಲಾ ವರ್ಗದ ರೈತರಿಗೆ ಈ ಹಿಂದೆ ನೀಡುತ್ತಿದ್ದ ಸಬ್ಸಿಡಿಯನ್ನು ಅದೇ ಮಾದರಿಯಲ್ಲಿ ಮುಂದುವರಿಸುತ್ತಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದ್ದಾರೆ.

ಜಿಲ್ಲಾ ಕೃಷಿ ಅಧಿಕಾರಿಗಳ ಜೊತೆ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳ ಪ್ರಗತಿ ಪರಿಶೀಲನೆ ಸಭೆಯನ್ನು ಶುಕ್ರವಾರ ನಡೆಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಈ ಹಿಂದೆ ಎಲ್ಲಾ ವರ್ಗದ 2 ಹೆಕ್ಟೇರ್ ಭೂಮಿ ಹೊಂದಿರುವ ರೈತರಿಗೆ ಶೇ 90 ರಷ್ಟು, 5 ಹೆಕ್ಟೇರ್ ಭೂಮಿ ಹೊಂದಿರುವ ರೈತರಿಗೆ ಶೇ 45 ರಷ್ಟು ಸಬ್ಸಿಡಿ ನೀಡಲಾಗುತ್ತಿತ್ತು. ಮುಖ್ಯಮಂತ್ರಿ ಆದೇಶದ ಮೇರೆಗೆ ಇದೀಗ ಮತ್ತೆ ಹಳೆಯ ಮಾದರಿಯಲ್ಲೇ ಸಬ್ಸಿಡಿ
ಮುಂದುವರೆಸಲಾಗುವುದು, 5 ಹೆಕ್ಟೇರ್ ಮೇಲ್ಪಟ್ಟ ಯಾವುದೇ ರೈತರಿಗೆ ಸಬ್ಸಿಡಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಪಹಣಿಯಲ್ಲಿ ಬೆಳೆ ಸಮೀಕ್ಷೆ ವಿವರ ನಮೂದು:

ಈ ಮುಂಗಾರಿನಲ್ಲಿ ಸುಮಾರು 2.10 ಕೋಟಿ ತಾಕುಗಳಲ್ಲಿ ಬೆಳೆ ಸಮೀಕ್ಷೆ ನಡೆಸುವ ಉದ್ದೇಶ ಹೊಂದಲಾಗಿದೆ. ಕಳೆದ ಬಾರಿಯಂತೆ ಈ ವರ್ಷವೂ ರೈತರೇ ಮೊಬೈಲ್‌ ಆ್ಯಪ್‌ ಮೂಲಕವೇ ಸಮೀಕ್ಷೆ ನಡೆಸಲಿದ್ದಾರೆ. ಕಳೆದ ಬಾರಿ ಮೊಬೈಲ್‌ ಆ್ಯಪ್ ಮೂಲಕ ನಡೆಸಿದ ಬೆಳೆ ಸಮೀಕ್ಷೆ ಯಶಸ್ವಿಯಾಗಿತ್ತು. ಅದಕ್ಕೆ ಕೇಂದ್ರ ಸರ್ಕಾರವೂ ಮೆಚ್ಚುಗೆ ವ್ಯಕ್ತಪಡಿಸಿತ್ತು ಎಂದು ಬಿ.ಸಿ. ಪಾಟೀಲ ಹೇಳಿದರು.

ಈ ವರ್ಷ ರೈತ ತನ್ನ ಬೆಳೆಗೆ ತಾನೇ ಸಮೀಕ್ಷೆ ನಡೆಸಿ ‘ನನ್ನ ಬೆಳೆ ನನ್ನ ಹಕ್ಕು’ ಎಂಬ ಪ್ರಮಾಣ ಪತ್ರ ಪಡೆಯುವ ಮೊಬೈಲ್ ಆ್ಯಪ್‌ ಬೆಳೆ ಸಮೀಕ್ಷೆಗೆ ಚಾಲನೆ ನೀಡಲಾಗಿದೆ ಎಂದರು.

2021–22 ನೇ ಸಾಲಿನಲ್ಲಿ ಮುಂಗಾರು ಪೂರ್ವ 1.09 ಲಕ್ಷ ತಾಕುಗಳನ್ನು ರೈತರೇ ಸ್ವತಃ ಆ್ಯಪ್‌ನಲ್ಲಿ ಹಾಗೂ 28.96 ಲಕ್ಷ ತಾಕುಗಳನ್ನು ಖಾಸಗಿ ನಿವಾಸಿಗಳ ಮೂಲಕ ಆ್ಯಪ್‌ ಮೂಲಕ ಮಾಹಿತಿ ಅಪ್‌ಲೋಡ್‌ ಮಾಡಿದ್ದಾರೆ. ಈ ವರ್ಷದಿಂದ ರೈತರ ಬೆಳೆ ಸಮೀಕ್ಷೆ ಮಾಹಿತಿಯನ್ನು ರೈತರ ಆರ್‌ಟಿಸಿ ಪಹಣಿಯಲ್ಲಿ ನಮೂದಿಸಲಾಗುವುದು ಎಂದು ಪಾಟೀಲ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT