ಬೆಂಗಳೂರು: ಮುಖ್ಯಮಂತ್ರಿಗಳ ಸೂಕ್ಷ್ಮ ನೀರಾವರಿ ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆ ಈ ಹಿಂದೆ ನೀಡುತ್ತಿದ್ದ ಸಬ್ಸಿಡಿಯನ್ನು ಅದೇ ಮಾದರಿಯಲ್ಲಿ ಮುಂದುವರೆಸುತ್ತಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದ್ದಾರೆ.

ವಿಕಾಸಸೌಧದದಲ್ಲಿ ಜಿಲ್ಲಾ ಕೃಷಿ ಅಧಿಕಾರಿಗಳ ಜೊತೆ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ಪ್ರಗತಿ ಕುರಿತು ಸಭೆಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಈ ಹಿಂದೆ ಎಲ್ಲಾ ವರ್ಗದ 2 ಹೆಕ್ಟೇರ್ ಭೂಮಿಯುಳ್ಳ ರೈತರಿಗೆ ಶೇ 90 ರಷ್ಟು, 5 ಹೆಕ್ಟೇರ್ ಭೂಮಿಯುಳ್ಳ ರೈತರಿಗೆ ಶೇ 45 ರಷ್ಟು ಸಬ್ಸಿಡಿ ನೀಡಲಾಗುತ್ತಿತ್ತು. ಮುಖ್ಯಮಂತ್ರಿ ಆದೇಶದ ಮೇರೆಗೆ ಇದೀಗ ಮತ್ತೆ ಅದೇ ಹಳೆಯ ಮಾದರಿಯ ಸಬ್ಸಿಡಿಯನ್ನು ಮುಂದುವರೆಸಲಾಗುವುದು, 5 ಹೆಕ್ಟೇರ್ ಮೇಲ್ಪಟ್ಟ ಯಾವುದೇ ರೈತರಿಗೆ ಸಬ್ಸಿಡಿ ಇರುವುದಿಲ್ಲ ಎಂದರು.

ಆರ್.ಟಿ.ಸಿ ಪಹಣಿಯಲ್ಲಿ ಬೆಳೆ ಸಮೀಕ್ಷೆ ವಿವರ ನಮೂದು: ಕಳೆದ ಬಾರಿ ರೈತರಿಂದಲೇ ಬೆಳೆ ಸಮೀಕ್ಷೆಯನ್ನು ನಡೆಸುವ ಮೊಬೈಲ್ ಆ್ಯಪ್ ಬೆಳೆ ಸಮೀಕ್ಷೆ ಯಶಸ್ವಿಯಾಗಿದ್ದು, ಕೇಂದ್ರದಿಂದ ಮೆಚ್ಚುಗೆಯನ್ನು ಪಡೆದಿದೆ. ಅಲ್ಲದೇ, ಕರ್ನಾಟಕ ‘ಅಗ್ರಿ ಟ್ರೆಂಡ್ ಸೆಕ್ಟರ್’ ಎನ್ನುವ ಕೇಂದ್ರದ ಶ್ಲಾಘನೆಗೂ ಪಾತ್ರವಾಗಿ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ. ಈ ವರ್ಷವೂ ಸಹ ರೈತನೇ ತನ್ನ ಬೆಳೆಗೆ ತಾನೇ ಸಮೀಕ್ಷೆ ನಡೆಸಿ ತಾನೇ ‘ನನ್ನ ಬೆಳೆ ನನ್ನ ಹಕ್ಕು’ ಎಂದು ಪ್ರಮಾಣಪತ್ರ ನೀಡುವ ಮೊಬೈಲ್ ಆ್ಯಪ್ ಬೆಳೆ ಸಮೀಕ್ಷೆಗೆ ಚಾಲನೆ ನೀಡಲಾಗಿದೆ. ಈ ವರ್ಷವೂ ಸಹ ಮುಂಗಾರು ಹಂಗಾಮಿನಲ್ಲಿ ಸುಮಾರು 2.10 ಕೋಟಿ ತಾಕುಗಳಲ್ಲಿ ಬೆಳೆ ಸಮೀಕ್ಷೆ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.

ರೈತರೇ ಕಳೆದ ಬಾರಿಯಂತೆ ಈ ಬಾರಿಯೂ ಸಹ ತಮ್ಮ ಬೆಳೆ ಸಮೀಕ್ಷೆಯನ್ನು ಮೊಬೈಲ್ ಆ್ಯಪ್ ಮೂಲಕ ದಾಖಲಿಸುವಂತೆ ಅವರು ಮನವಿ ಮಾಡಿದರು.

2021-22 ನೇ ಸಾಲಿನಲ್ಲಿ ಪೂರ್ವ ಮುಂಗಾರಿನಲ್ಲಿ ಇಲ್ಲಿಯವರೆಗೆ 1.09 ಲಕ್ಷ ತಾಕುಗಳನ್ನು ರೈತರೇ ಸ್ವತಃ ಆ್ಯಪ್ ನಲ್ಲಿ ಹಾಗೂ 28.96 ಲಕ್ಷ ತಾಕುಗಳನ್ನು ಖಾಸಗಿ ನಿವಾಸಿಗಳ ಮೂಲಕ ಆ್ಯಪ್ ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಈ ವರ್ಷದಿಂದ ರೈತರ ಬೆಳೆ ಸಮೀಕ್ಷೆ ಮಾಹಿತಿಯನ್ನು ಇನ್ನು ಮುಂದೆ ರೈತರ ಆರ್.ಟಿ.ಸಿ. ಪಹಣಿಯಲ್ಲಿ ಸಹ ನಮೂದಾಗಲಿದೆ ಎಂದರು.

ಇದನ್ನೂ ಓದಿ... ದೆಹಲಿಗೆ ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ: ಸಂಜೆ ಪ್ರಧಾನಿ ಮೋದಿ ಭೇಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.