ಶನಿವಾರ, ಏಪ್ರಿಲ್ 1, 2023
33 °C

ಅಂಗನವಾಡಿ ನೌಕರರ ಹೋರಾಟ ತೀವ್ರ; 48 ಗಂಟೆಯ ಗಡುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗ್ರಾಚ್ಯುಟಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು  ಅಂಗನವಾಡಿ ಕಾರ್ಯಕರ್ತೆಯರು‌ ಹಾಗೂ ಸಹಾಯಕಿಯರು ತೀವ್ರಗೊಳಿಸಲು ತೀರ್ಮಾನಿಸಿದ್ದಾರೆ.

ಸೋಮವಾರಕ್ಕೆ ಪ್ರತಿಭಟನೆ 8 ದಿನ ಪೂರೈಸಿದೆ. ಬೇಡಿಕೆ ಈಡೇರಿಕೆ ಸಂಬಂಧ ಆದೇಶ ಹೊರಡಿಸಲು ನೌಕರರ ಸಂಘವು 48 ಗಂಟೆಗಳ ಗಡುವು ನೀಡಿದೆ. 

ಆದೇಶ‌ ನೀಡದಿದ್ದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಸಾವಿರಾರು ಸಂಖ್ಯೆಯ ಪ್ರತಿಭಟನಕಾರರ ಜತೆಗೆ ಮುತ್ತಿಗೆ ಹಾಕಲಾಗುವುದು ಎಂದು ಸಂಘದ ಅಧ್ಯಕ್ಷೆ ಎಸ್. ವರಲಕ್ಷ್ಮಿ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಎಚ್ಚರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು