ಮಂಗಳವಾರ, ಅಕ್ಟೋಬರ್ 27, 2020
22 °C

ಪಿಯು ಉಪನ್ಯಾಸಕರಿಗೆ ಇದೇ 21ರಿಂದ ದಸರಾ ರಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಇದೇ 21ರಿಂದ ನ.1ರವರೆಗೆ ದಸರಾ ರಜೆ ಘೋಷಿಸಲಾಗಿದೆ.

‘ಪದವಿಪೂರ್ವ ಶಿಕ್ಷಣ ಉಪನ್ಯಾಸಕರಿಗೆ ರಜೆ ಘೋಷಿಸಲು ಇಲಾಖೆಯ ಅಧಿಕಾರಿಗಳಿಗೆ ಸೂಚನೆ
ನೀಡಲಾಗಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಶುಕ್ರವಾರ ಟ್ವೀಟ್‌ ಮೂಲಕ ತಿಳಿಸಿದರು.

ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರಿಗೆ ಅ.12ರಿಂದ 30ರವರೆಗೆ ಮಧ್ಯಂತರ ರಜೆ ಘೋಷಿಸಿದ ನಂತರ, ದಸರಾ ರಜೆಗಾಗಿ ಉಪನ್ಯಾಸಕರು ಕೂಡ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

‘ಮೂರು ವಾರಗಳ ದಸರಾ ರಜೆನೀಡಿ, ಮನೆಯಿಂದಲೇ ಯೂಟ್ಯೂಬ್‌ ತರಗತಿಗಳನ್ನು ನಿರ್ವಹಿಸಲು ಅವಕಾಶ ನೀಡಬೇಕು’ ಎಂದು ಉಪನ್ಯಾಸಕರ ಸಂಘ ಕೋರಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು