ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿ: ಗೋಪೂಜೆ ಬಳಿಕ ಮುಖ್ಯಮಂತ್ರಿ ಘೋಷಣೆ
ಉಡುಪಿ: ರಾಜ್ಯದಲ್ಲಿ ಸೋಮವಾರದಿಂದ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ಬಂದಿದ್ದು, ರಾಜ್ಯ ಸರ್ಕಾರ ಐತಿಹಾಸಿಕ ನಿರ್ಣಯ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಕರಂಬಳ್ಳಿ ವೆಂಕಟರಮಣ ದೇವಸ್ಥಾನದಲ್ಲಿ ಸೋಮವಾರ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಗೋಪೂಜೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ‘ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಯಾಗಿದೆ. ಯಾವುದೇ ಕಾರಣಕ್ಕೂ ಗೋಹತ್ಯೆಗೆ ಅವಕಾಶ ನೀಡುವುದಿಲ್ಲ. ಎಲ್ಲರೂ ಕಾನೂನನ್ನು ಪಾಲಿಸಬೇಕು. ಗೋಹತ್ಯೆ ನಿಷೇಧವಾದ ಬಳಿಕ ಉಡುಪಿಗೆ ಬಂದು ಗೋಪೂಜೆ ಮಾಡಿದ್ದು ಸಂತಸವಾಗಿದೆ ಎಂದು ಹೇಳಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.