ಶುಕ್ರವಾರ, ಮಾರ್ಚ್ 31, 2023
22 °C

ಡಿ.ಕೆ.ಶಿವಕುಮಾರ್‌ ಭೇಟಿಯಾದ ಕಿಚ್ಚ ಸುದೀಪ್: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. 

ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಸುದೀಪ್ ಹಾಗೂ ಡಿಕೆಶಿ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಇಬ್ಬರು ಭೇಟಿಯಾಗಿರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. 

ಓದಿ... ರಾಜಕೀಯ ಕುತೂಹಲ: ನಟ ಸುದೀಪ್ ಭೇಟಿ ಕುರಿತು ಡಿ.ಕೆ ಶಿವಕುಮಾರ್‌ ಹೇಳಿದ್ದೇನು?

ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ ಪಕ್ಷಗಳು ವಿಧಾನಸಭಾ ಚುನಾವಣೆಗೆ ಭರದ ಸಿದ್ಧತೆ ನಡೆಯುತ್ತಿವೆ. ಎಲ್ಲಾ ಪಕ್ಷಗಳು ಪ್ರಚಾರಕ್ಕಾಗಿ ಸೆಲೆಬ್ರಿಟಿಗಳ ಮೊರೆ ಹೋಗುತ್ತಿದ್ದು, ಪ್ರಮುಖರನ್ನು ಪಕ್ಷಕ್ಕೆ ಕರೆತರುವ ಪ್ರಯತ್ನ ಮಾಡುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆ  ಸುದೀಪ್ ಅವರು ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. 

ಸುದೀಪ್ ಕಾಂಗ್ರೆಸ್​ಗೆ ಸೇರ್ಪಡೆ ಆಗಲಿದ್ದಾರೆ ಎನ್ನುವ ಮಾತುಗಳು ಕೆಲ ದಿನಗಳಿಂದ ಕೇಳಿಬರುತ್ತಿವೆ. ಆದರೆ, ಈ ಬಗ್ಗೆ ಅವರು ಅಧಿಕೃತವಾಗಿ ಹೇಳಿಕೊಂಡಿಲ್ಲ. 

ಓದಿ... ಕಾಂಗ್ರೆಸ್‌ನಿಂದ 136 ಶಾಸಕರು ಗೆಲ್ಲುವುದು ಖಚಿತ: ಡಿ.ಕೆ.ಶಿವಕುಮಾರ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು