ಬಿಡದಿ (ರಾಮನಗರ): ಮಾಜಿ ಸಚಿವ ಎ. ಮಂಜು ಶನಿವಾರ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ಎಚ್.ಡಿ. ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದರು.
ಬಿಡದಿಯಲ್ಲಿರುವ ಎಚ್.ಡಿ. ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಮಂಜು ಅವರಿಗೆ ಪಕ್ಷದ ಶಾಲು ಹಾಕಿ ಬರಮಾಡಿಕೊಂಡರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ
ಎಚ್.ಡಿ. ಕುಮಾರಸ್ವಾಮಿ, ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮತ್ತಿತರರು ಈ ಸಂದರ್ಭ ಹಾಜರಿದ್ದರು.
ರಾಜಕೀಯ ಜೀವನದ ಆರಂಭದಿಂದಲೂ ಹಾಸನದಲ್ಲಿ ದೇವೇಗೌಡರ ಕುಟುಂಬವನ್ನು ವಿರೋಧಿಸುತ್ತಲೇ ಬಂದಿದ್ದ ಮಂಜು ಇದೀಗ ಜೆಡಿಎಸ್ ಸೇರ್ಪಡೆ ಆಗಿದ್ದಾರೆ. ಹಾಸನ ಜಿಲ್ಲೆಯಲ್ಲಿ ಸದ್ಯ ಜೆಡಿಎಸ್ ಪಂಚರತ್ನ ಯಾತ್ರೆ ನಡೆದಿದೆ. ಇದೇ 16ರಂದು ಅರಕಲಗೂಡಿನಲ್ಲಿ ಯಾತ್ರೆಗೆ ಸಿದ್ಧತೆ ನಡೆದಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.