ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯನವರೇ, ದಲಿತ ನಾಯಕರನ್ನು ಸೋಲಿಸಿದ ನೀವು ಹೇಗೆ ಓಟು ಕೇಳ್ತೀರಿ?:ಬಿಜೆಪಿ

Last Updated 22 ಮಾರ್ಚ್ 2023, 6:26 IST
ಅಕ್ಷರ ಗಾತ್ರ

ಬೆಂಗಳೂರು: ‘ಸಿದ್ದರಾಮಯ್ಯ ಅವರೇ, ದಲಿತ ನಾಯಕರನ್ನು ಸೋಲಿಸಿದ ನೀವು ಚುನಾವಣೆಯಲ್ಲಿ ಯಾವ ಮುಖವಿಟ್ಟುಕೊಂಡು ದಲಿತರಲ್ಲಿ ಓಟು ಕೇಳುತ್ತೀರಿ’ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ದಲಿತರ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಚುನಾವಣೆ ಹತ್ತಿರ ಬಂದಂತೆ ಕಾಂಗ್ರೆಸ್‌ ಪಕ್ಷಕ್ಕೆ ದಲಿತರ ನೆನಪಾಗಿದೆ. ದಲಿತರು ಈ ಭಾರಿ ನಿಮ್ಮನ್ನು ಸೋಲಿಸುತ್ತಾರೆ ಎಂಬ ಸಮೀಕ್ಷೆ ಆಧರಿಸಿ ಕೋಲಾರ ಬಿಟ್ಟು ಓಡಿದ ಸಿದ್ದರಾಮಯ್ಯ ಅವರೇ, ದಲಿತ ನಾಯಕರನ್ನು ಸೋಲಿಸಿದ ನೀವು ಯಾವ ಮುಖವಿಟ್ಟುಕೊಂಡು ದಲಿತರಲ್ಲಿ ಓಟು ಕೇಳುತ್ತೀರಿ’ ಎಂದು ಬಿಜೆಪಿ ಪ್ರಶ್ನಿಸಿದೆ.

‘ದಲಿತ ವಿರೋಧಿ ಕಾಂಗ್ರೆಸ್ ಪಕ್ಷವು ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಕುತಂತ್ರದಿಂದ ಸೋಲಿಸಿ, ಅವರ ಶವ ಸಂಸ್ಕಾರಕ್ಕೂ ಜಾಗ ನೀಡಿರಲಿಲ್ಲ. ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ಐದು ಸ್ಥಳಗಳನ್ನು ಗುರುತಿಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪಂಚತೀರ್ಥ ಯೋಜನೆಯಡಿ ಅಭಿವೃದ್ಧಿಗೊಳಿಸಿದೆ’ ಎಂದು ಬಿಜೆಪಿ ಹೇಳಿದೆ.

‘ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ದಲಿತ ನಾಯಕರಾದ ಡಾ.ಜಿ ಪರಮೇಶ್ವರ್, ಮಲ್ಲಿಕಾರ್ಜುನ್ ಖರ್ಗೆ, ಶ್ರೀನಿವಾಸ್ ಪ್ರಸಾದ್, ಮುನಿಯಪ್ಪ ಅವರನ್ನು ಮೂಲೆಗುಂಪು ಮಾಡಿತ್ತು. ಅಖಂಡ ಶ್ರೀನಿವಾಸಮೂರ್ತಿ ಮೇಲೆ ದಾಳಿ ನಡೆದಾಗಲು, ತುಷ್ಟೀಕರಣದ ಕಾರಣದಿಂದ ಅವರನ್ನು ಕಾಂಗ್ರೆಸ್ ಬೆಂಬಲಿಸಲಿಲ್ಲ’ ಎಂದು ಬಿಜೆಪಿ ಟೀಕಿಸಿದೆ.

‘ದಲಿತರನ್ನು ಮತ ಬ್ಯಾಂಕ್ ಆಗಿ ಬಳಸಿಕೊಂಡ ಕಾಂಗ್ರೆಸ್ ಪಕ್ಷವು ದಲಿತರಿಗೆ ಮೀಸಲಾತಿಯನ್ನು ಕೊಡುವುದನ್ನು ನಿರಾಕರಣೆ ಮಾಡಿತ್ತು. ಪರಿಶಿಷ್ಟ ವರ್ಗದ ಮೀಸಲಾತಿಯನ್ನು ಹೆಚ್ಚಿಸಿದ್ದು, ಲಂಬಾಣಿ ಸಮುದಾಯಕ್ಕೆ ಹಕ್ಕು ಪತ್ರವನ್ನು ವಿತರಣೆ ಮಾಡಿದ್ದು ನಮ್ಮ ಸರ್ಕಾರ’ ಎಂದು ಬಿಜೆಪಿ ಕಿಡಿಕಾರಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT