ಮಂಗಳವಾರ, ಮಾರ್ಚ್ 21, 2023
29 °C

ಬೊಮ್ಮಾಯಿ ಅವರೇ, ಹಗರಣಗಳ ಸಾಧನೆ ಪಟ್ಟಿ ಹಿಡಿದು ಮತ ಕೇಳುವಿರಾ: ಕಾಂಗ್ರೆಸ್ ಟೀಕೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಮುಂಬರುವ ವಿಧಾನಸಭೆ ಚುನಾವಣೆಗೆ ಜನರ ಮುಂದೆ ಹಗರಣಗಳ ಸಾಧನೆ ಪಟ್ಟಿ ಹಿಡಿದು ಮತ ಕೇಳಲು ಹೋಗುವಿರಾ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. 

ರಾಜ್ಯದ ವಿವಿಧ ನೀರಾವರಿ ಯೋಜನೆಗಳಲ್ಲಿ ಅಕ್ರಮ ಕುರಿತು ‘ಪ್ರಜಾವಾಣಿ’ಯಲ್ಲಿ ಪ್ರಕಟಗೊಂಡಿರುವ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ರಾಜ್ಯದ ವಿವಿಧ ನೀರಾವರಿ ಯೋಜನೆಗಳಲ್ಲಿ ಒಟ್ಟು ₹22,000 ಕೋಟಿ ಅಕ್ರಮ ನಡೆದಿದೆ ಎಂದು ಸ್ವತಃ ಬಿಜೆಪಿ ಶಾಸಕರೇ ದೂರಿದರೂ ಸಿಎಂ ಮಾತಾಡದಿರುವುದೇಕೆ’ ಎಂದು ಟೀಕಿಸಿದೆ. 

‘ಬೊಮ್ಮಾಯಿ ಅವರೇ, ನಿಮ್ಮ ಆಡಳಿತದಲ್ಲಿ ಯಾವುದೇ ಒಂದು ಇಲಾಖೆಯೂ ಹಗರಣ ಮುಕ್ತವಾಗಿಲ್ಲವೇಕೆ?,  ಚುನಾವಣೆಗೆ ಜನರ ಮುಂದೆ ಹಗರಣಗಳ ಸಾಧನೆ ಪಟ್ಟಿ ಹಿಡಿದು ಮತ ಕೇಳಲು ಹೋಗುವಿರಾ? ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ವಿವಿಧ ನೀರಾವರಿ ನಿಗಮಗಳಲ್ಲಿ ₹22,200 ಕೋಟಿ ಮೊತ್ತದ ಟೆಂಡರ್ ಅಕ್ರಮ ನಡೆದಿದ್ದು, ಟೆಂಡರ್‌ಗಳನ್ನು ಕೂಡಲೇ ರದ್ದುಪಡಿಸಬೇಕು ಎಂದು ಹೊಸದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೂಳಿಹಟ್ಟಿ ಶೇಖರ್ ಆಗ್ರಹಿಸಿದ್ದಾರೆ.

ಅಕ್ರಮದ ಕುರಿತು ಜಲಸಂಪನ್ಮೂಲ ಇಲಾಖೆ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿಗೆ ಫೆ.3ರಂದು ದೂರು ನೀಡಿರುವ ಅವರು, ಕಾಮ ಗಾರಿಗಳ ಕಾರ್ಯಾದೇಶ ರದ್ದುಪಡಿಸಿ ಮರು ಟೆಂಡರ್ ಕರೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಓದಿ...

ನೀರಾವರಿ: ₹22,200 ಕೋಟಿ ಟೆಂಡರ್ ಅಕ್ರಮ -ಬಿಜೆಪಿ ಶಾಸಕ ಗೂಳಿಹಟ್ಟಿ ಆರೋಪ 

ಧೈರ್ಯವಿದ್ದರೆ ರಾಜೀನಾಮೆ ನೀಡಿ ನನ್ನ ವಿರುದ್ಧ ಸ್ಪರ್ಧಿಸಿ: ಶಿಂದೆಗೆ ಆದಿತ್ಯ ಸವಾಲು

ಏಷ್ಯಾ ಕಪ್ ಟೂರ್ನಿ ಆಯೋಜಿಸದಿದ್ದರೆ, ವಿಶ್ವಕಪ್‌ನಲ್ಲಿ ಭಾಗವಹಿಸುವುದಿಲ್ಲ: ಪಿಸಿಬಿ ಬೆದರಿಕೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು