ಕ್ಷೇತ್ರವಿಲ್ಲದೆ ಅಲೆದಾಡುತ್ತಿರುವ ಸಿದ್ದರಾಮಯ್ಯ ಮನೆಯಲ್ಲಿರುವುದು ಸೂಕ್ತ: ಬಿಜೆಪಿ

ಬೆಂಗಳೂರು: ಕ್ಷೇತ್ರವಿಲ್ಲದೆ ಅಲೆದಾಡುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನೆಯಲ್ಲಿರುವುದು ಸೂಕ್ತ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸುವ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಬಿಜೆಪಿ, ‘ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಮತ್ತೆ ಅಧಿಕಾರಕ್ಕೆ ತರುತ್ತೇನೆ ಎನ್ನುತ್ತಿರುವ ಸಿದ್ದರಾಮಯ್ಯ, ತಾನು ಗೆಲ್ಲುವ ಕ್ಷೇತ್ರವಿಲ್ಲದೆ ಅಲೆದಾಡುತ್ತಿದ್ದಾರೆ’ ಎಂದು ಟೀಕಿಸಿದೆ.
‘ಇದು ಸಿದ್ದರಾಮಯ್ಯ ಅವರ 40 ವರ್ಷದ ರಾಜಕೀಯ ಜೀವನದ ಸೋಲು. ಸದ್ಯಕ್ಕೆ ಅವರಿಗೆ ಸುರಕ್ಷಿತ ಕ್ಷೇತ್ರ ಅಂದ್ರೆ ಮನೆ ಮಾತ್ರ. ಅಲ್ಲೇ ಇರುವುದು ಕ್ಷೇಮ’ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಪಕ್ಷದ ಮುಖಂಡರು, ಕಾರ್ಯಕರ್ತರ ಒತ್ತಡದ ಹಿನ್ನೆಲೆ ಸಿದ್ದರಾಮಯ್ಯ ಅವರು ಇತ್ತೀಚೆಗೆ ಕೋಲಾರಕ್ಕೆ ಭೇಟಿ ಕೊಟ್ಟಿದ್ದರು.
ಸಿದ್ದರಾಮಯ್ಯ ಭೇಟಿ ಬೆನ್ನಲ್ಲೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.
ಓದಿ... ಅಶಾಂತಿ ನಿರ್ಮಾಣಕ್ಕೆ ಪ್ರತಾಪ ಹೇಳಿಕೆ: ಸಿದ್ದರಾಮಯ್ಯ ಟೀಕೆ
ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಮತ್ತೆ ಅಧಿಕಾರಕ್ಕೆ ತರುತ್ತೇನೆ ಎನ್ನುತ್ತಿರುವ ಸಿದ್ದರಾಮಯ್ಯ, ತಾನು ಗೆಲ್ಲುವ ಕ್ಷೇತ್ರವಿಲ್ಲದೇ ಅಲೆದಾಡುತ್ತಿದ್ದಾರೆ. ಇದು @siddaramaiah ಅವರ 40 ವರ್ಷದ ರಾಜಕೀಯ ಜೀವನದ ಸೋಲು. ಸದ್ಯಕ್ಕೆ ಅವರಿಗೆ ಸುರಕ್ಷಿತ ಕ್ಷೇತ್ರ ಅಂದ್ರೆ ಮನೆ ಮಾತ್ರ. ಅಲ್ಲೇ ಇರುವುದು ಕ್ಷೇಮ. pic.twitter.com/NcWQK7RKav
— BJP Karnataka (@BJP4Karnataka) November 15, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.