ಬುಧವಾರ, ಮಾರ್ಚ್ 22, 2023
32 °C

ಕಟೀಲ್ ಅವರದು ಬಚ್ಚಲು ಬಾಯಿ: ಡಿ.ಕೆ. ಶಿವಕುಮಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‌‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನಾಲಿಗೆಯಲ್ಲಿ ಮೂಳೆ ಮಾತ್ರವಲ್ಲ, ನಿಯಂತ್ರಣವೂ ಇಲ್ಲ. ಅವರದು ಬಚ್ಚಲು ಬಾಯಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು.

‘ಕಾಂಗ್ರೆಸ್ ನಾಯಕರು ಸಭೆ ಮಾಡಿದರೆ ಚಪ್ಪಲಿಗಳು ಕೈಗೆ ಬರುತ್ತವೆ’ ಎಂಬ ಕಟೀಲ್ ‌ಹೇಳಿಕೆ ಬಗ್ಗೆ ಸುದ್ದಿಗಾರರಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ‘ಕಟೀಲ್ ಅವರು ಮೊದಲು ಯತ್ನಾಳ್, ನಿರಾಣಿ, ವಿಶ್ವನಾಥ್, ಯೋಗೇಶ್ವರ್ ಮಾತಿಗೆ ಉತ್ತರ ನೀಡಲಿ’ ಎಂದರು.

ಕಾಂಗ್ರೆಸ್ ಒಡೆಯಲು ಟಿಆರ್‌ಎಸ್ ನಾಯಕ ಕೆ.ಸಿ. ಚಂದ್ರಶೇಖರರಾವ್ ಹಣ ನೀಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಈ ಬಗ್ಗೆ ನನಗೆ ಗೊತ್ತಿಲ್ಲ. ಹಣ ಕೊಟ್ಟಿರುವವರು ಹಾಗೂ ತೆಗೆದುಕೊಂಡವರನ್ನು ಕೇಳಿ’ ಎಂದರು.

ಮೊದಲ ಟಿಕೆಟ್ ಪಟ್ಟಿ ಬಗ್ಗೆ ಕೇಳಿದಾಗ, ‘ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ಫೆ. 2ರಂದು ನಡೆಯಲಿದೆ. ಆಕಾಂಕ್ಷಿಗಳ ಜತೆ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ. ರಾಜ್ಯ ಪ್ರವಾಸ ಮುಗಿಸಿ ಚರ್ಚೆ ಮಾಡಿ ಆದಷ್ಟು ಬೇಗ ತೀರ್ಮಾನ ಮಾಡುತ್ತೇವೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು