ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಗುರುಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸರ್ವಸದಸ್ಯರ ಸಭೆಯಲ್ಲಿ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರ ಪತ್ನಿ ನಾಗರತ್ನ ಸಂಘದ ಪದಾಧಿಕಾರಿಗಳು ಮತ್ತು ಶಿಕ್ಷಕಿಯರಿಗೆ ಬಾಗಿನದೊಂದಿಗೆ ಸೀರೆ ಹಂಚಿದರು.
‘ಪ್ರತಿ ವರ್ಷದಂತೆ ಈ ಬಾರಿಯೂ ಮಹಿಳಾ ದಿನ ಆಚರಿಸಲಾಗಿದೆ. ಶಾಸಕರ ಪತ್ನಿ ಸೀರೆ ಹಂಚುವ ವಿಚಾರ ನಮಗೆ ತಿಳಿದಿರಲಿಲ್ಲ. ಜೆಡಿಎಸ್ ಚಿಹ್ನೆ ಇರುವ ಉಡುಗೊರೆ ನೀಡಿರುವುದಕ್ಕೂ ಸರ್ಕಾರಿ ಶಿಕ್ಷಕರ ಸಂಘಕ್ಕೂ ಯಾವುದೇ ಸಂಬಂಧವಿಲ್ಲ’ ಎಂದು ಶಿಕ್ಷಕರ ಸಂಘದ ಪದಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ಶಾಸಕರ ಪತ್ನಿ ಕೆಲವು ದಿನಗಳ ಹಿಂದೆ ತಮ್ಮ ಮನೆಯ ಮುಂದೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತರು, ಅಂಗನವಾಡಿ ಶಿಕ್ಷಕಿಯರು, ಅಡುಗೆ ಸಹಾಯಕರಿಗೆ ಸೀರೆ ಹಂಚಿದ್ದರು.
ಶಾಸಕರ ಭಾವ ಚಿತ್ರ ಮತ್ತು ಜೆಡಿಎಸ್ ಚಿಹ್ನೆ ಇರುವ ಕೈಚೀಲದೊಳಗೆ ಸೀರೆ ಇಟ್ಟು ಶಿಕ್ಷಕಿಯರಿಗೆ ಉಡುಗೊರೆ ನೀಡುವ ಪೋಟೊ ಮತ್ತು ವಿಡಿಯೊ ತೆಗೆಯದಂತೆ ಸ್ಥಳೀಯ ಪುರಸಭೆ ಸದಸ್ಯರು, ಜೆಡಿಎಸ್ ಮುಖಂಡರು ಮಾಧ್ಯಮ ಪ್ರತಿನಿಧಿಗಳಿಗೆ ತಾಕೀತು ಮಾಡಿದರು. ಇದರಿಂದ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳ ನಡುವೆ ವಾಗ್ವಾದ ನಡೆಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.