ಮೋದಿ ಅವರೇ, ಸುನೀಲಗೆ ಕೈ ಮುಗಿಯುವಿರಾ, ಕಾಲಿಗೆ ಬೀಳುವಿರಾ: ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು: ರೌಡಿ ಶೀಟರ್ ಸೈಲೆಂಟ್ ಸುನೀಲ ಸೇರಿದಂತೆ ಇತರೆ ರೌಡಿಗಳನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿರುವುದಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.
ಇದೇ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಫೈಟರ್ ರವಿ ಎದುರು ಕೈಮುಗಿದು ನಿಂತ ಪ್ರಧಾನಿ ನರೇಂದ್ರ ಮೋದಿ ಅವರೇ, ಮುಂದಿನ ಬಾರಿ ರಾಜ್ಯಕ್ಕೆ ಬಂದಾಗ ಮತ್ತೊಬ್ಬ ರೌಡಿ ಸೈಲೆಂಟ್ ಸುನೀಲನಿಗೆ ಕೈ ಮುಗಿಯುವಿರಾ, ಕಾಲಿಗೆ ಬೀಳುವಿರಾ ನಿಮ್ಮ ವಿವೇಚನೆಗೆ ಬಿಟ್ಟಿದ್ದು!, ನಿಮ್ಮನ್ನು ಸ್ವಾಗತಿಸಲು ಮತ್ತೊಬ್ಬ ಪಾತಕಿಯನ್ನು ರಾಜ್ಯ ಬಿಜೆಪಿ ಪಕ್ಷ ಸೇರ್ಪಡೆ ಮಾಡಿಕೊಂಡಿದೆ’ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
‘ಕುಖ್ಯಾತ ಪಾತಕಿ ಸೈಲೆಂಟ್ ಸುನೀಲನನ್ನು ಪಕ್ಷಕ್ಕೆ ಅಧಿಕೃತವಾಗಿ ಸೇರಿಸಿಕೊಳ್ಳುವ ಮೂಲಕ ಬಿಜೆಪಿ ರೌಡಿ ಮೋರ್ಚಾಕ್ಕೆ ಬಹಿರಂಗವಾಗಿ ಚಾಲನೆ ದೊರೆತಿದೆ. ಯಾವುದೇ ಕಾರಣಕ್ಕೂ ರೌಡಿ ಶೀಟರ್‌ಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರೇ, ನಿಮ್ಮ ನಾಲಿಗೆಯನ್ನು ಈಗ ಯಾವುದರಲ್ಲಿ ತೊಳೆದುಕೊಳ್ಳುವಿರಿ... ಗೋಮೂತ್ರವೋ, ಗೋಮಯವೋ!? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ನಳಿನ್ ಕುಮಾರ್ ಕಟೀಲ್ ಅವರೇ, ‘ಯಾವುದೇ ಕಾರಣಕ್ಕೂ ಸೈಲೆಂಟ್ ಸುನೀಲನನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ’ ಎಂದು ಈ ಹಿಂದೆ ನೀವೇ ಹೇಳಿದ್ದಲ್ಲವೇ ಇದು? ನಿಮ್ಮ ಬಾಯಲ್ಲಿರುವ ನಾಲಿಗೆಗಳೆಷ್ಟು? ನಿಮ್ಮ ಮಾತುಗಳಿಗೆ ಇರುವ ಬದ್ಧತೆ ಎಷ್ಟು? ಬಿಜೆಪಿ ಪಕ್ಷ ನಿಮ್ಮ ಹಿಡಿತದಲ್ಲಿಲ್ಲವೇ? ಅಥವಾ ಮೋದಿ ಆಜ್ಞೆಯಂತೆ ಸೇರಿಸಿಕೊಂಡಿರಾ’ ಎಂದು ಕಾಂಗ್ರೆಸ್ ಗುಡುಗಿದೆ.
‘ಪಶ್ಚಿಮ ಬಂಗಾಳ, ಕೇರಳದ ಆರ್‌ಎಸ್‌ಎಸ್ ಕಚೇರಿಗಳಲ್ಲಿ ಗನ್, ಗ್ರೆನೇಡ್, ಬಾಂಬ್‌ಗಳು ಇರುವುದು ಬೆಳಕಿಗೆ ಬಂದಿತ್ತು. ಕರ್ನಾಟಕದ ಬಿಜೆಪಿ ಕಚೇರಿಯಲ್ಲಿ ಇನ್ನು ಮುಂದೆ ಲಾಂಗ್, ಮಚ್ಚು, ಡ್ರ್ಯಾಗರ್‌ಗಳ ಸಂಗ್ರಹ ಇರಲಿದೆ. ರೌಡಿಗಳಿಗೆ ಬಿಜೆಪಿ ಮೇಲೆ ಪ್ರೀತಿಯೋ, ಬಿಜೆಪಿಗೆ ರೌಡಿಗಳ ಮೇಲೆ ಪ್ರೀತಿಯೋ ಎಂಬುದನ್ನು ಕಟೀಲ್ ಅವರೇ ಉತ್ತರಿಸಬೇಕು’ ಎಂದು ಕಾಂಗ್ರೆಸ್ ಕುಟುಕಿದೆ.
ಸುನೀಲ್‌ಗೂ ಪಕ್ಷಕ್ಕೂ ಸಂಬಂಧವಿಲ್ಲ: ಬಿಜೆಪಿ
ಬೆಂಗಳೂರು: ಸೈಲೆಂಟ್ ಸುನೀಲ್ ಮತ್ತು ಬಿಜೆಪಿಗೆ ಯಾವುದೇ ಸಂಬಂಧವಿಲ್ಲ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್ ಅವರು ತಿಳಿಸಿದ್ದಾರೆ.
ಈ ಬಗ್ಗೆ ಶನಿವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಲಾಗಿದ್ದು, ಸೈಲೆಂಟ್ ಸುನೀಲ್, ಬಿಜೆಪಿ ಸದಸ್ಯತ್ವ ಪಡೆದಿದ್ದರೆ ಅದನ್ನು ರದ್ದು ಮಾಡಲಾಗುವುದು. ಅವರು ಪಾರ್ಟಿ ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದರೆ, ಅದಕ್ಕೂ ನಮಗೂ ಸಂಬಂಧವಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
ಹಲವು ಪ್ರಕರಣಗಳಲ್ಲಿ ಸಿಸಿಬಿ ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದ ರೌಡಿ ಸೈಲೆಂಟ್ ಸುನೀಲ್, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಬಿಜೆಪಿ ಮುಖಂಡರ ಜೊತೆ ಪ್ರತ್ಯಕ್ಷನಾಗಿದ್ದ. ಈ ಕಾರ್ಯಕ್ರಮದ ವಿಡಿಯೊ ಹಾಗೂ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದವು. ವಿಪಕ್ಷಗಳು ಬಿಜೆಪಿಯನ್ನು ತೀವ್ರವಾಗಿ ತರಾಟೆಗೆದುಕೊಂಡಿದ್ದವು.
ಇವನ್ನೂ ಓದಿ...
ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಲ್ಲವೆಂದು ಮೊದಲೇ ಹೇಳಿದ್ದೆ: ಯಡಿಯೂರಪ್ಪ
ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸದಿದ್ದರೆ ನಿವೃತ್ತಿ: ಶಾಸಕ ಶ್ರೀನಿವಾಸಗೌಡ
ವಿಧಾನಸಭೆ ಚುನಾವಣೆ | ಸಿದ್ದರಾಮಯ್ಯಗೆ ಅಲೆದಾಟ ತಪ್ಪಿದ್ದಲ್ಲ: ಬಸವರಾಜ ಬೊಮ್ಮಾಯಿ
ಫೈಟರ್ ರವಿ ಎದುರು ಕೈಮುಗಿದು ನಿಂತ @narendramodi ಅವರೇ, ಮುಂದಿನ ಬಾರಿ ಬಂದಾಗ ಮತ್ತೊಬ್ಬ ರೌಡಿ ಸೈಲೆಂಟ್ ಸುನೀಲನಿಗೆ ಕೈ ಮುಗಿಯುವಿರಾ, ಕಾಲಿಗೆ ಬೀಳುವಿರಾ ನಿಮ್ಮ ವಿವೇಚನೆಗೆ ಬಿಟ್ಟಿದ್ದು!
ನಿಮ್ಮನ್ನು ಸ್ವಾಗತಿಸಲು ಮತ್ತೊಬ್ಬ ಪಾತಕಿಯನ್ನು @BJP4Karnataka ಪಕ್ಷ ಸೇರ್ಪಡೆ ಮಾಡಿಕೊಂಡಿದೆ.#BJPRowdyMorcha pic.twitter.com/ESLZ7YN9fx
— Karnataka Congress (@INCKarnataka) March 18, 2023
ಕುಖ್ಯಾತ ಪಾತಕಿ ಸೈಲೆಂಟ್ ಸುನೀಲನನ್ನು ಪಕ್ಷಕ್ಕೆ ಅಧಿಕೃತವಾಗಿ ಸೇರಿಸಿಕೊಳ್ಳುವ ಮೂಲಕ#BJPRowdyMorcha ಕ್ಕೆ ಬಹಿರಂಗವಾಗಿ ಚಾಲನೆ ದೊರೆತಿದೆ!
ಯಾವುದೇ ಕಾರಣಕ್ಕೂ ರೌಡಿ ಶೀಟರ್‌ಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದಿದ್ದ @BSBommai ಅವರೇ, ನಿಮ್ಮ ನಾಲಿಗೆಯನ್ನು ಈಗ ಯಾವುದರಲ್ಲಿ ತೊಳೆದುಕೊಳ್ಳುವಿರಿ?
ಗೋಮೂತ್ರವೋ, ಗೋಮಯವೋ!? pic.twitter.com/1e2UawSpC7
— Karnataka Congress (@INCKarnataka) March 18, 2023
ಪ. ಬಂಗಾಳ, ಕೇರಳದ RSS ಕಚೇರಿಗಳಲ್ಲಿ ಗನ್ನು, ಗ್ರೆನೇಡ್, ಬಾಂಬುಗಳು ಇರುವುದು ಬೆಳಕಿಗೆ ಬಂದಿತ್ತು.
ಕರ್ನಾಟಕದ @BJP4Karnataka ಕಚೇರಿಯಲ್ಲಿ ಇನ್ನು ಮುಂದೆ ಲಾಂಗು, ಮಚ್ಚು, ಡ್ರ್ಯಾಗರ್‌ಗಳ ಸಂಗ್ರಹ ಇರಲಿದೆ!
ರೌಡಿಗಳಿಗೆ ಬಿಜೆಪಿ ಮೇಲೆ ಪ್ರೀತಿಯೋ, ಬಿಜೆಪಿಗೆ ರೌಡಿಗಳ ಮೇಲೆ ಪ್ರೀತಿಯೋ @nalinkateel ಉತ್ತರಿಸಬೇಕು.#BJPRowdyMorcha pic.twitter.com/bUigWwEByu
— Karnataka Congress (@INCKarnataka) March 18, 2023
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.