ಬೆಂಗಳೂರು: ಎಸ್‌ಸಿ ಮೀಸಲಾತಿ ವಿಳಂಬ ಖಂಡಿಸಿ ರಾಜಭವನ ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ಮಾರ್ಗ ಮಧ್ಯೆ ತಡೆದಿದ್ದು, ವಶಕ್ಕೆ ಪಡೆದಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಮುಖಂಡರು ಘೋಷಣೆ ಕೂಗಿದರು.
ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ, ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಸದ್ಯ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದಿರುವ ಪೊಲೀಸರು ಬಸ್‌ನಲ್ಲಿ ಕರೆದುಕೊಂಡು ಹೋಗಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.