ಹೊಸಪೇಟೆ (ವಿಜಯನಗರ): ಜಿಲ್ಲೆಯ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ ಅವರು ಅವರ ಶಾಸಕ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ.
ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇಷ್ಟರಲ್ಲೇ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಗೊತ್ತಾಗಿದೆ.
ಗೋಪಾಲಕೃಷ್ಣ ಅವರು ಬಿಜೆಪಿ ತೊರೆಯಲಿದ್ದಾರೆ ಎಂಬ ಮಾತುಗಳು ಕಳೆದ ಹಲವು ದಿನಗಳಿಂದ ಜಿಲ್ಲೆಯಲ್ಲಿ ಕೇಳಿ ಬರುತ್ತಿತ್ತು. ಈಗ ಅದು ನಿಜವಾಗಿದೆ. ಎರಡ್ಮೂರು ದಿನಗಳಲ್ಲಿ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಅವರ ಆಪ್ತ ಮೂಲಗಳು ‘ಪ್ರಜಾವಾಣಿ’ಗೆ ಖಚಿತಪಡಿಸಿವೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೋಪಾಲಕೃಷ್ಣ ಅವರು ಕಣಕ್ಕಿಳಿಯಲಿದ್ದಾರೆ ಎಂದು ಗೊತ್ತಾಗಿದೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.