ಸೋಮವಾರ, 29 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕದಲ್ಲಿ ಮೋದಿ –ಶಾ ಮ್ಯಾಜಿಕ್‌ ಕೆಲಸ ಮಾಡುವುದಿಲ್ಲ: ಕುಮಾರಸ್ವಾಮಿ ವ್ಯಂಗ್ಯ

Last Updated 11 ಡಿಸೆಂಬರ್ 2022, 11:11 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಅವರ ಮ್ಯಾಜಿಕ್ ಕೆಲಸ ಮಾಡುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಜೆಡಿಎಸ್ ಮಾತ್ರ ಪರ್ಯಾಯವಾಗಿದೆ. ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟವಿದೆ. ಇತ್ತ ಬಿಜೆಪಿ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಗುಜರಾತ್ ಮಾಡೆಲ್ ಕೆಲಸ ಮಾಡುವುದಿಲ್ಲ. ರಾಜ್ಯದ ಜನರು ಈಗಾಗಲೇ ಮನಸ್ಸು ಮಾಡಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಭಾರಿ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT