ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಯಕರ್ತರಲ್ಲಿ ತಂದಿಟ್ಟು ತಮಾಷೆ ನೋಡ್ತಿದ್ದಾರೆ ಸಿದ್ದರಾಮ‌ಯ್ಯ: ಅಶ್ವತ್ಥನಾರಾಯಣ

Last Updated 19 ಆಗಸ್ಟ್ 2022, 7:31 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ –ಬಿಜೆಪಿ ಕಾರ್ಯಕರ್ತರ ನಡುವೆ ತಂದಿಟ್ಟು ತಮಾಷೆ ನೋಡುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್‌. ಅಶ್ವತ್ಥನಾರಾಯಣ ಕಿಡಿಕಾರಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಲು ಗುರುವಾರ ಬಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ಘೇರಾವ್ ಹಾಕಿದ್ದರು. ಕಪ್ಪು ಬಾವುಟ ಪ್ರದರ್ಶಿಸಿ, ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕೋಳಿಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು.

ಘಟನೆಯನ್ನು ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಅಶ್ವತ್ಥನಾರಾಯಣ, ‘ಪ್ರಚೋದನಕಾರಿ ಹೇಳಿಕೆ ನೀಡುವಲ್ಲಿ ನಿಸ್ಸೀಮರಾದ ಸಿದ್ದರಾಮಯ್ಯ ಅವರು ಮುಸ್ಲಿಂ ಏರಿಯಾದಲ್ಲಿ ವೀರ ಸಾವರ್ಕರ್‌ ಫೋಟೊ ಯಾಕೆ? ಎಂದು ಕೇಳಿ ದೇಶಭಕ್ತರನ್ನು ಕೆರಳಿಸಿದ್ದಾರೆ. ಈಗ ತಮಗೂ ಮೊಟ್ಟೆ ಎಸೆಯಲು ಬರಲ್ವಾ? ಎಂದು ಕೇಳುವ ಮೂಲಕ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ತಂದಿಟ್ಟು ತಮಾಷೆ ನೋಡುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರೇ, ನಿಮ್ಮ ಸಿದ್ಧಾಂತ ಯಾವುದು? ಮತಾಂಧ ಟಿಪ್ಪುವನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಬಿಂಬಿಸುವುದೇ?, ಮುಸ್ಲಿಂ ಏರಿಯಾದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಹಾಕಬಾರದು ಎಂಬುದೇ? ಜಾತಿ, ಧರ್ಮವನ್ನೊಡೆದು ಆಳುವುದೇ? ಅಥವಾ, ನೆಹರು ಕುಟುಂಬದ ಗುಲಾಮಗಿರಿ ಮಾಡುವುದೇ’ ಎಂದು ಅಶ್ವತ್ಥನಾರಾಯಣ ಪ್ರಶ್ನಿಸಿದ್ದಾರೆ.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT