ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ಮುಂದುವರಿಕೆ

Last Updated 18 ಫೆಬ್ರುವರಿ 2022, 20:42 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುತ್ತಿರುವ ಧರಣಿಗಳು ಶುಕ್ರವಾರವೂ ಮುಂದುವರಿದವು.

ಅತಿಥಿ ಉಪನ್ಯಾಸಕರ ಧರಣಿ ಐದನೇ ದಿನಕ್ಕೆ:
‘ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಿ, ಸೇವಾ ಭದ್ರತೆ ಒದಗಿಸಬೇಕು’ ಎಂದು ಒತ್ತಾಯಿಸಿ ‘ರಾಜ್ಯ ಅತಿಥಿ ಉಪನ್ಯಾಸಕರ ಒಕ್ಕೂಟ’ ನೇತೃತ್ವದಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ಉಪನ್ಯಾಸಕರು ನಡೆಸುತ್ತಿರುವ ಧರಣಿ ಶುಕ್ರವಾರ ಐದನೇ ದಿನ ಪೂರೈಸಿದೆ.

ಕನ್ನಡ ಶಾಲೆ ಉಳಿಸಿ ಹೋರಾಟ ನಾಲ್ಕನೇ ದಿನಕ್ಕೆ:
‘1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ– ಕಾಲೇಜುಗಳನ್ನೂ ವೇತನಾಅನುದಾನಕ್ಕೆ ಒಳಪಡಿಸಬೇಕು’ ಎಂದು ಒತ್ತಾಯಿಸಿ ‘ರಾಜ್ಯ ಅನುದಾನ ರಹಿತ ಶಾಲಾ–ಕಾಲೇಜು ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟ’ ಪದಾಧಿಕಾರಿಗಳು ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಶುಕ್ರವಾರ ನಾಲ್ಕನೇ ದಿನಕ್ಕೆ ಪೂರೈಸಿದೆ.

ವಾಲ್ಮೀಕಿ ಶ್ರೀ ಧರಣಿ ಒಂಬತ್ತನೇ ದಿನಕ್ಕೆ:
‘ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ7.5ಕ್ಕೆ ಹೆಚ್ಚಿಸಬೇಕು.ನ್ಯಾಯಮೂರ್ತಿ ನಾಗಮೋಹನದಾಸ್ ವರದಿಯ ಶಿಫಾರಸುಗಳನ್ನು ಅನುಷ್ಠಾನಗೊಳಿಸಬೇಕು’ ಎಂದು ಒತ್ತಾಯಿಸಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ, ಸ್ವಾತಂತ್ರ್ಯ ಉದ್ಯಾನದಲ್ಲಿ ಆರಂಭಿಸಿರುವ ಅನಿರ್ದಿಷ್ಟಾವಧಿ ಧರಣಿ ಶುಕ್ರವಾರ ಒಂಬತ್ತನೇ ದಿನ ಪೂರೈಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT