ಮತಾಂತರ ಮಸೂದೆ ಇಂದು ಮಂಡನೆ: ಸಚಿವ ಸಂಪುಟ ಸಭೆ ಒಪ್ಪಿಗೆ

ಬೆಳಗಾವಿ(ಸುವರ್ಣ ವಿಧಾನಸೌಧ): ರಾಜ್ಯದಲ್ಲಿ ಮತಾಂತರ ನಿಷೇಧಕ್ಕಾಗಿ ತರಲು ಉದ್ದೇಶಿಸಿರುವ ‘ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ– 2021’ ಮಸೂದೆಯನ್ನು ವಿಧಾನಮಂಡಲದಲ್ಲಿ ಮಂಡಿಸಲು ಸೋಮವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಮಸೂದೆಯನ್ನು ಕರಡು ರೂಪದಲ್ಲೇ ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಒತ್ತಾಯ ಮತ್ತು ಆಮಿಷ ಒಡ್ಡಿ ಮತಾಂತರ ನಡೆಸುವುದನ್ನು ನಿಷೇಧಿಸುವ ಪ್ರಸ್ತಾವ ಈ ಮಸೂದೆಯಲ್ಲಿದೆ. ಅದರ ಪ್ರಕಾರ,ಎಸ್‌ಸಿ, ಎಸ್‌ಟಿ, ಅಪ್ರಾಪ್ತ ವಯಸ್ಕರು, ಮಹಿಳೆಯರು, ಬುದ್ಧಿಮಾಂದ್ಯರನ್ನು ಮತಾಂತರ ಮಾಡಿದವರಿಗೆ ಕನಿಷ್ಠ 3 ವರ್ಷದಿಂದ 10 ವರ್ಷದವರೆಗೆ ಜೈಲು, ₹ 50 ಸಾವಿರ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ... ಮತಾಂತರ ನಿಷೇಧ ಮಸೂದೆ: ಮಠಾಧೀಶರ ಬೆಂಬಲ ಕೋರಿದ ಸಿ.ಎಂ ಬೊಮ್ಮಾಯಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.