ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಡಿಕೆ ಅಧ್ಯಯನಕ್ಕೆ ಕೇಂದ್ರ ಸಮಿತಿ: ಆರಗ ಜ್ಞಾನೇಂದ್ರ

Last Updated 21 ಮಾರ್ಚ್ 2022, 20:01 IST
ಅಕ್ಷರ ಗಾತ್ರ

ಬೆಂಗಳೂರು: ಅಡಿಕೆ ಆರೋಗ್ಯಕ್ಕೆ ಹಾನಿಕಾರಕವಲ್ಲ ಎಂಬ ಬಗ್ಗೆ ಅಧ್ಯಯನಕ್ಕೆ ಸಮಿತಿ ರಚನೆಗೆ ಕೇಂದ್ರ ಕೃಷಿ ಸಚಿವರು ಒಪ್ಪಿಗೆ ನೀಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ಕರ್ನಾಟಕದ ಅಡಕೆ ಕಾರ್ಯಪಡೆ ಸದಸ್ಯರು ಇತ್ತೀಚೆಗೆ ದೆಹಲಿಯಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌, ಕೃಷಿ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಅಡಿಕೆಯಿಂದ ಹಾನಿ ಆಗುತ್ತದೆ ಎಂಬ ಅರ್ಥದಲ್ಲಿ ಹೇಳಿಕೆ ನೀಡಬಾರದು. ಇದರಿಂದ ಅಡಿಕೆ ಮಾ

ರುಕಟ್ಟೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಮನವಿ ಮಾಡಲಾಯಿತು. ಅದಕ್ಕೆ ಅವರು ಒಪ್ಪಿದ್ದಾರೆ ಎಂದು ಆರಗ ತಿಳಿಸಿದರು. ಹಿಂದಿನ ಕಾಂಗ್ರೆಸ್ ಸರ್ಕಾರ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಅಫಿಡವಿಟ್‌ ಅನ್ನು ತೆಗೆಯುವ ಸಲುವಾಗಿ ನಾವು ಪ್ರಯತ್ನ ಮಾಡ್ತಿದ್ದೇವೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT