ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಮಂಡಲದ ಜಂಟಿ ಅಧಿವೇಶನ: ಕಪ್ಪು ಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ

Last Updated 14 ಫೆಬ್ರುವರಿ 2022, 7:10 IST
ಅಕ್ಷರ ಗಾತ್ರ

ಬೆಂಗಳೂರು: ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಬರದಂತೆ ನಿರ್ಬಂಧ ಹೇರಿರುವುದು ಮತ್ತು ರಾಷ್ಟ್ರ ಧ್ವಜದ ವಿಚಾರದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ಖಂಡಿಸಿ ಕಾಂಗ್ರೆಸ್ ಸದಸ್ಯರು ಕಪ್ಪು ಪಟ್ಟಿ ಧರಿಸಿಕೊಂಡು ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್‌ನ ಎಲ್ಲ ಸದಸ್ಯರು ತೋಳಿಗೆ ಕಪ್ಪು ಪಟ್ಟಿ ಧರಿಸಿ ಕಲಾಪದಲ್ಲಿ ಪಾಲ್ಗೊಂಡಿದ್ದಾರೆ.

ಕಲಬುರಗಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕಿ ಖನೀಜ್ ಫಾತಿಮಾ ಹಿಜಾಬ್ ಧರಿಸಿಕೊಂಡೇ ಕಲಾಪದಲ್ಲಿ ಭಾಗವಹಿಸಿದ್ದಾರೆ‌.

ಶಿವಮೊಗ್ಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಡಿ.ಎಸ್. ಅರುಣ್ ಕೇಸರಿ ಶಾಲು ಧರಿಸಿ ಜಂಟಿ ಅಧಿವೇಶನದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT