ಬೆಳಗಾವಿ: ಅಬಕಾರಿ ಆದಾಯವನ್ನು ಹೆಚ್ಚಿಸಲು ಹಣಕಾಸು ಇಲಾಖೆಯವರು ಒತ್ತಡ ಹೇರಬಾರದು. ಒತ್ತಡ ಹೇರಿದರೆ ಹಳ್ಳಿಗಳಲ್ಲಿ ಮದ್ಯದಂಗಡಿ ತಲೆ ಎತ್ತಿ ಸಮಸ್ಯೆ ಸೃಷ್ಟಿಯಾಗಲಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಮಂಗಳವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಈ. ತುಕಾರಾಂ ಪ್ರಶ್ನೆಗೆ ಅಬಕಾರಿ ಸಚಿವ ಕೆ.ಗೋಪಾಲಯ್ಯ ಉತ್ತರಿಸುತ್ತಿದ್ದ ವೇಳೆ ಮಧ್ಯಪ್ರವೇಶಿಸಿದ ಕಾಗೇರಿ, ’ಹಣಕಾಸು ಇಲಾಖೆಯ ಅಧಿಕಾರಿಗಳ ಧೋರಣೆಯಿಂದ ಗ್ರಾಮೀಣ ಜನರ ಜೀವ ಹಾಳಾಗುತ್ತಿದೆ. ಹಣಕಾಸು ಇಲಾಖೆಯ ಅಧಿಕಾರಿಗಳು ಕನಿಷ್ಠ 4 ದಿನ ಹಳ್ಳಿಗಳಲ್ಲಿ ವಾಸ್ತವ್ಯ ಮಾಡಬೇಕು. ಆಗ ನೈಜ ಸಮಸ್ಯೆ ಅರಿವಾಗುತ್ತದೆ. ಆಗ ಅಬಕಾರಿ ಆದಾಯ ಹೆಚ್ಚಿಸಲು ಒತ್ತಡ ಹೇರುವುದು ನಿಲ್ಲಲಿದೆ‘ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.