ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತಾಂತರ ನಿಷೇಧ ಮಸೂದೆ: ವಿರೋಧ ವ್ಯಕ್ತಪಡಿಸಲು ಕಾಂಗ್ರೆಸ್ ನಿರ್ಧಾರ

Last Updated 15 ಡಿಸೆಂಬರ್ 2021, 22:20 IST
ಅಕ್ಷರ ಗಾತ್ರ

ಬೆಳಗಾವಿ (ಸುವರ್ಣ ವಿಧಾನಸೌಧ): ‘ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಉದ್ದೇಶದಿಂದ ರಾಜ್ಯ ಸರ್ಕಾರ ಮಂಡಿಸಲು ಉದ್ದೇಶಿಸಿರುವ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಲು ಕಾಂಗ್ರೆಸ್ ನಿರ್ಧರಿಸಿದೆ.

ಸಿದ್ದರಾಮಯ್ಯ ಅವರ ಅಧ್ಯಕ್ಷತೆ ಯಲ್ಲಿ ಬುಧವಾರ ಇಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ‘ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಜನರ ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಒಂದು ಜಾತಿ ಹಾಗೂ ಧರ್ಮವನ್ನು ಗುರಿಯಾಗಿಟ್ಟುಕೊಂಡು, ರಾಜಕೀಯ ಕಾರಣಕ್ಕಾಗಿ ಕಾಯ್ದೆ ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಇದು ಕೂಡಾ ಆ ಪಕ್ಷದ ರಹಸ್ಯ ಕಾರ್ಯಸೂಚಿಯಾಗಿದೆ. ಇದನ್ನು ವಿರೋಧಿಸಬೇಕಾಗಿದೆ’ ಎಂದರು. ಅದಕ್ಕೆ ಸಭೆ ಸರ್ವಾನುಮತ ದಿಂದ ಒಪ್ಪಿಗೆ ಸೂಚಿಸಿತು.

‘ಮಳೆಗೆ 23 ಜಿಲ್ಲೆಗಳಲ್ಲಿ ಬೆಳೆ ಹಾನಿಗೆ ಒಳಗಾಗಿದೆ. ಲಕ್ಷಾಂತರ ಮನೆಗಳು ಕುಸಿದಿವೆ. ಆದರೆ, ಸರ್ಕಾರ ಪರಿಹಾರ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ. ₹ 18 ಸಾವಿರ ಕೋಟಿಗಳಷ್ಟುಹಾನಿಯಾಗಿದ್ದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ನಯಾಪೈಸೆ ಪರಿಹಾರ ಕೊಟ್ಟಿಲ್ಲ. ಈ ಬಗ್ಗೆಯೂ ಹೋರಾಟ ಕೈಗೆತ್ತಿಕೊಳ್ಳಬೇಕಿದೆ. ಸತ್ಯಾಂಶವನ್ನು ಜನರ ಮುಂದಿಡುವ ಕೆಲಸವನ್ನು ಪಕ್ಷದ ಶಾಸಕರು ಮಾಡಬೇಕು’ ಎಂದರು.

ಎಪಿಎಂಸಿ, ಭೂ ಸುಧಾರಣೆ ಮತ್ತು ಜಾನುವಾರು ನಿಷೇಧ ಹತ್ಯೆಗೆ ಸಂಬಂಧಿಸಿದ ಕಾಯ್ದೆಗಳನ್ನು ವಾಪಸ್‌ ಪಡೆಯುವಂತೆ ಸರ್ಕಾರವನ್ನು ಒತ್ತಾಯಿಸಲು ಕೂಡಾ ಸಭೆ ತೀರ್ಮಾನಿಸಿದೆ. ಈ ಕುರಿತು ನಿಲುವಳಿ ಸೂಚನೆ ಮಂಡಿಸುವುದಾಗಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನ ಪರಿಷತ್‌ಗೆ ಹೊಸತಾಗಿ ಚುನಾಯಿತರಾದ ಸಲೀಂ ಅಹಮದ್ ಮತ್ತು ಚನ್ನರಾಜ ಹಟ್ಟಿಹೊಳಿ ಅವರನ್ನು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ಅಭಿನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT