ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಬಂದ್‌ | ರಾಜ್ಯದಲ್ಲಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Last Updated 28 ಸೆಪ್ಟೆಂಬರ್ 2020, 12:22 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿ ಮತ್ತು ಎಪಿಎಂಸಿಗೆ ಸಂಬಂಧಿಸಿದಂತೆ ಹೊರಡಿಸಿರುವ ತಿದ್ದುಪಡಿ ಮಸೂದೆಗಳನ್ನು ಖಂಡಿಸಿ ರೈತ, ಕಾರ್ಮಿಕ, ದಲಿತ, ಕನ್ನಡಪರ ಹಾಗೂ ವಿವಿಧ ಸಂಘಟನೆಗಳು ಸೋಮವಾರ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರಾಜ್ಯದಲ್ಲಿ ಮಧ್ಯಾಹ್ನ 12 ಗಂಟೆಯ ವೇಳೆಗೆ ಯಾವುದೇ ಅಹಿತಕರ ಘಟನೆಗಳು ನಡೆದ ಬಗ್ಗೆ ವರದಿಯಾಗಿಲ್ಲ.

ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಕರ್ನಾಟಕ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕರಾವಳಿ ಮತ್ತು ಹಳೇ ಮೈಸೂರು ಭಾಗದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಹುಬ್ಬಳ್ಳಿ ಮತ್ತು ಬಾಗಲಕೋಟೆಯಲ್ಲಿ ಕರ್ನಾಟಕ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ ಬಿಜೆಪಿಯೇತರ ರಾಜಕೀಯ ಪಕ್ಷಗಳು ಹಾಗೂ ವಿವಿಧ ಸಂಘಟನೆಗಳು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಪ್ರಧಾನಿ ನರೇಂದ್ರ ಮೋದಿ ಪ್ರತಿಕೃತಿಗಳನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಎಲ್ಲಾ ಜಿಲ್ಲೆ ಕೇಂದ್ರಗಳಲ್ಲೂ ರೈತ, ಕಾರ್ಮಿಕ, ದಲಿತ, ಕನ್ನಡಪರ ಹಾಗೂ ವಿವಿಧ ಸಂಘಟನೆಗಳು ಸೇರಿದಂತೆ ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಸಿಪಿಐ(ಎಂ) ಪಕ್ಷಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT