ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿಯಲ್ಲಿ ಭಯೋತ್ಪಾದನೆ: ಪುಂಡರನ್ನು ಬೇಟೆಯಾಡಲು ಕುಮಾರಸ್ವಾಮಿ ಒತ್ತಾಯ

Last Updated 18 ಡಿಸೆಂಬರ್ 2021, 10:38 IST
ಅಕ್ಷರ ಗಾತ್ರ

ಬೆಂಗಳೂರು: ಬೆಳಗಾವಿಯಲ್ಲಿ ಭಯೋತ್ಪಾದನೆ ಸೃಷ್ಟಿಸುತ್ತಿರುವ ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರುವುದಿಲ್ಲ. ಅವರಿಗೆ ತಕ್ಕ ಪಾಠ ಕಲಿಸುವಕಾಲ ಸನ್ನಿಹಿತವಾಗಿದೆ ಎಂದು ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಶನಿವಾರ ಸರಣಿ ಟ್ವೀಟ್‌ ಮಾಡಿರುವ ಅವರು, ‘ಬೆಳಗಾವಿಯಲ್ಲಿ ಕಳೆದ ರಾತ್ರಿ ಪುಂಡರು ಪೊಲೀಸ್‌ ವಾಹನಗಳಿಗೆ ಹಾನಿ ಮಾಡಿ ಬೆಂಕಿ ಹಚ್ಚಿರುವುದು ಅಕ್ಷಮ್ಯ. ವಿಧಾನಮಂಡಲ ಅಧಿವೇಶನಕ್ಕೆ ಹೋಗಲು ಪಾಸ್‌ ಅಂಟಿಸಲಾಗಿದ್ದ ವಾಹನಗಳನ್ನೇ ಗುರಿ ಮಾಡಲಾಗಿದೆ. ಕನ್ನಡಿಗರ ಹೆಮ್ಮೆ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಹಾಳು ಮಾಡಿರುವುದು ಕ್ಷಮಾರ್ಹವಲ್ಲದ ಅಪರಾಧ. ಇದು ಖಂಡನೀಯ‘ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಬೆಳಗಾವಿಯಲ್ಲಿ ಪ್ರಕ್ಷುಬ್ಧತೆ ಸೃಷ್ಟಿಸಿ ಭಾಷಾ ವೈಷಮ್ಯ ಹೆಚ್ಚಿಸುವುದು ದುರುಳರ ಉದ್ದೇಶವಿದ್ದಂತಿದೆ. ಶಾಂತಿಯನ್ನು ಕದಡಿ ಜನರಲ್ಲಿ ಭಯಭೀತಿ ಉಂಟು ಮಾಡಲು ಪುಂಡರನ್ನು ಪ್ರಚೋದಿಸಿದವರನ್ನು ಹೊರಗೆಳೆದು ಶಿಕ್ಷಿಸಬೇಕು. ಈ ಪುಂಡಾಟದ ಹಿಂದೆ ದೊಡ್ಡ ಹುನ್ನಾರವೇ ಇರುವಂತಿದೆ‘ ಎಂದು ಕುಮಾರಸ್ವಾಮಿ ಟ್ವೀಟಿಸಿದ್ದಾರೆ.

‘ಬೆಳಗಾವಿ ವಿವಾದ ಮುಗಿದ ಅಧ್ಯಾಯ. ಆದಾಗ್ಯೂ ಕೆಲ ವಿಚ್ಛಿಧ್ರಕಾರಿ ಶಕ್ತಿಗಳು ಆ ಭಾಗದಲ್ಲಿ ಅಶಾಂತಿ ಸೃಷ್ಟಿಸುತ್ತ ಕನ್ನಡಿಗರು-ಮರಾಠಿಗರ ನಡುವೆ ವೈಷಮ್ಯಕ್ಕೆ ಕಾರಣವಾಗುತ್ತಿದ್ದಾರೆ. ಅಂಥ ಶಕ್ತಿಗಳನ್ನು ಸರಕಾರ ಮೂಲೋತ್ಪಾಟನೆ ಮಾಡಬೇಕು. ಪುಂಡರನ್ನು ಕೂಡಲೇ ಬೇಟೆಯಾಡಿ ಇನ್ನೆಂದೂ ಅಂಥ ತಪ್ಪು ಮಾಡದಂತೆ ತಕ್ಕಶಾಸ್ತಿ ಮಾಡಬೇಕು‘ ಎಂದು ಎಚ್‌ಡಿಕೆ ಒತ್ತಾಯಿಸಿದ್ದಾರೆ.

‘ಸರಕಾರಿ ಕಾರುಗಳನ್ನು ಗುರಿ ಮಾಡಿರುವುದು ರಾಜ್ಯ ಸರಕಾರವನ್ನೇ ಗುರಿ ಮಾಡಿದಂತೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೇಲೆ ದಾಳಿ ಮಾಡಿರುವುದು ಕನ್ನಡಿಗರ ಮೇಲೆ, ಕರ್ನಾಟಕದ ಮೇಲೆ ದಾಳಿಗೆ ಸಮ. ಸರಕಾರ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಕೂಡಲೇ ಆ ದುರುಳರಿಗೆ ಕನ್ನಡಿಗರ ಶಕ್ತಿ ಏನೆಂಬುದನ್ನು ತೋರಿಸಬೇಕು‘ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT