ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

7 ಭ್ರೂಣಗಳ ಪತ್ತೆ ಪ್ರಕರಣ: ಹೆರಿಗೆ ಆಸ್ಪತ್ರೆ, ಸ್ಕ್ಯಾನಿಂಗ್ ಸೆಂಟರ್ ಸೀಜ್

Last Updated 25 ಜೂನ್ 2022, 11:19 IST
ಅಕ್ಷರ ಗಾತ್ರ

ಮೂಡಲಗಿ: ಪಟ್ಟಣದ ಹಳ್ಳದಲ್ಲಿ ಶಕ್ರವಾರ ಪತ್ತೆಯಾದ ಏಳು ಭ್ರೂಣಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ, ಪಟ್ಟಣದ ವೆಂಕಟೇಶ್ ಹೆರಿಗೆ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಸೆಂಟರ್ ಅನ್ನು ಅಧಿಕಾರಿಗಳು ಸೀಜ್ ಮಾಡಿದರು.

"ಮೂರು ವರ್ಷಗಳಿಂದ ಈ ಆಸ್ಪತ್ರೆಯಲ್ಲಿ ಏಳು ಭ್ರೂಣಗಳ ಲಿಂಗ ಪತ್ತೆ ಮಾಡಿ ಹತ್ಯೆ ಮಾಡಿದ ಅನುಮಾನವಿದೆ. ಹೀಗಾಗಿ ಅಸ್ಪತ್ರೆ ಬಂದ್ ಮಾಡಿ ಇನ್ನಷ್ಟು ತನಿಖೆ ನಡೆಸಲಾಗುತ್ತಿದೆ" ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

"ಈ ಸ್ಕ್ಯಾನಿಂಗ್ ಸೆಂಟರ್ ಮೇಲೆ ಪೊಲೀಸರು ದಾಳಿ ಮಾಡಲು ಸಿದ್ಧತೆ ನಡೆಸಿದ್ದರು. ಇದು ಬಯಲಿಗೆ ಬರುವ ಭೀತಿಯಿಂದ ಆಸ್ಪತ್ರೆಯ ಸಿಬ್ಬಂದಿ ಈ ರೀತಿ ರಾತ್ರಿ ಭ್ರೂಣಗಳನ್ನು ಹಳ್ಳಕ್ಕೆ ಎಸೆದಿದ್ದಾರೆ.

ಜೂನ್ 23ರ ರಾತ್ರಿಯೇ ಈ ಕೃತ್ಯ ನಡೆದಿದೆ" ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪತ್ತೆಯಾದ ಭ್ರೂಣಗಳು ತಮ್ಮದೇ ಆಸ್ಪತ್ರೆಯಲ್ಲಿ ತೆಗೆದವು ಎಂದು ಒಪ್ಪಿಕೊಂಡಿರುವ ಆಸ್ಪತ್ರೆಯ ಆಡಳಿತ ಮಂಡಳಿಯವರು, "ಹೊಸ ಅಸ್ಪತೆಗೆ ಸ್ಥಳಾಂತರಗೊಳ್ಳುವ ಸಮಯದಲ್ಲಿ ಸಿಬಂದಿ ನಿರ್ಲಕ್ಷದ ಕಾರಣ ಇದು ನಡೆದಿದೆ" ಎಂದು ಪ್ರತಿಕ್ರಿಯೆ ನೀಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

"ಭ್ರೂಣಗಳ ಲಿಂಗಪತ್ತೆ ಹಾಗೂ ಹತ್ಯೆಗೆ ನಿಖರ ಕಾರಣ ಏನು ಎಂಬ ಬಗ್ಗೆ ವಿಚಾರಣೆ ನಡೆದಿದೆ" ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರತಿಕ್ರಿಯೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT