ಅನಂತಕುಮಾರ್ ಇದ್ದಿದ್ದರೆ ಹೀಗಾಗುತ್ತಿರಲಿಲ್ಲ: ಶಾಸಕ ಸತೀಶ್ ರೆಡ್ಡಿ ಅಸಮಾಧಾನ

ಬೆಂಗಳೂರು: ನೂತನ ಸಚಿವರ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 'ಯಡಿಯೂರಪ್ಪನವರೇ ಮಂತ್ರಿಮಂಡಲ ವಿಸ್ತರಣೆಯಲ್ಲಿ ಸಚಿವರ ಆಯ್ಕೆ ಪ್ರಕ್ರಿಯೆಯ ಮಾನದಂಡಗಳೇನು? ನಿಮಗೆ, ನಮ್ಮ ರಾಜ್ಯ ಮತ್ತು ರಾಷ್ಟ್ರದ ನಾಯಕರುಗಳಿಗೆ ನಿಷ್ಟಾವಂತ ಯುವ ಕಾರ್ಯಕರ್ತರು ಕಾಣುತ್ತಿಲ್ಲವೆ? ನಮ್ಮ ಕಷ್ಟ ನಷ್ಟಗಳನ್ನು ಆಲಿಸುತ್ತಿದ್ದ ಶ್ರೀ ಅನಂತಕುಮಾರ್ ಜಿ ರವರ ಇಲ್ಲದಿರುವಿಕೆ ಎದ್ದು ಕಾಣುತ್ತಿದೆ' ಎಂದು ಹೇಳಿದ್ದಾರೆ
ಯಡಿಯೂರಪ್ಪನವರೇ ಮಂತ್ರಿಮಂಡಲ ವಿಸ್ತರಣೆಯಲ್ಲಿ ಸಚಿವರ ಆಯ್ಕೆ ಪ್ರಕ್ರಿಯೆಯ ಮಾನದಂಡಗಳೇನು? ನಿಮಗೆ, ನಮ್ಮ ರಾಜ್ಯ ಮತ್ತು ರಾಷ್ಟ್ರದ ನಾಯಕರುಗಳಿಗೆ ನಿಷ್ಟಾವಂತ ಯುವ ಕಾರ್ಯಕರ್ತರು ಕಾಣುತ್ತಿಲ್ಲವೆ? ನಮ್ಮ ಕಷ್ಟ ನಷ್ಟಗಳನ್ನು ಆಲಿಸುತ್ತಿದ್ದ ಶ್ರೀ ಅನಂತಕುಮಾರ್ ಜಿ ರವರ ಇಲ್ಲದಿರುವಿಕೆ ಎದ್ದು ಕಾಣುತ್ತಿದೆ @BSYBJP @JPNadda @blsanthosh
— M Satish Reddy (@msrbommanahalli) January 13, 2021
ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿರುವ 7 ಶಾಸಕರ ಹೆಸರನ್ನು ಸಿಎಂ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಉಮೇಶ್ ಕತ್ತಿ, ಎಸ್. ಅಂಗಾರ, ಸಿ.ಪಿ. ಯೋಗೀಶ್ವರ್, ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್, ಆರ್. ಶಂಕರ್, ಮುರುಗೇಶ್ ನಿರಾಣಿ ಅವರ ಹೆಸರುಗಳನ್ನು ರಾಜಭವನಕ್ಕೆ ಕಳುಹಿಸಲಾಗಿದ್ದು, ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.