ಜೇಮ್ಸ್ ಚಿತ್ರವನ್ನು ಎತ್ತಂಗಡಿ ಮಾಡಲು ಬಿಜೆಪಿ ಯತ್ನಿಸಿದೆ ಎಂದು ಕಾಂಗ್ರೆಸ್‌ನ ರಾಜ್ಯ ಘಟಕವು ವಾಗ್ದಾಳಿ ನಡೆಸಿದೆ.

ಈ ಕುರಿತು ಶುಕ್ರವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಸಿನೆಮಾ ನಿರ್ಮಾಣ ಪ್ರಚಾರ, ಹಂಚಿಕೆ, ಪ್ರದರ್ಶನ ಸೇರಿ ಚಿತ್ರರಂಗದ ಎಲ್ಲ ಚಟುವಟಿಕೆಗಳನ್ನೂ ಬಿಜೆಪಿ ಸರ್ಕಾರವೇ ನಿಯಂತ್ರಿಸುತ್ತಿದೆಯೇ?’ ಎಂದು ಪ್ರಶ್ನಿಸಿದೆ.

‘ಪುನೀತ್‌ರವರ ಚಿತ್ರವನ್ನು ಚಿತ್ರಮಂದಿರದಲ್ಲಿ ಉಳಿಸಿಕೊಳ್ಳಲು ಸಿಎಂ ಬಳಿ ಗೋಗರೆಯುವ ಸ್ಥಿತಿ ನಿರ್ಮಾಣವಾಗಿದ್ದೇಕೆ? ಅಂದರೆ, ಜೇಮ್ಸ್ ಸಿನೆಮಾವನ್ನು ಎತ್ತಂಗಡಿ ಮಾಡಲು ಬಿಜೆಪಿ ಯತ್ನಿಸಿತ್ತಲ್ಲವೇ?’ ಎಂದು ಕಾಂಗ್ರೆಸ್ ಕೇಳಿದೆ.

ಕಾಶ್ಮೀರ್ ಫೈಲ್ಸ್ ಸಿನಿಮಾ ತೋರಿಸಲು ಹಾಗೂ ಆರ್‌ಆರ್‌ಆರ್ ಸಿನಿಮಾಕ್ಕೆ ಚಿತ್ರಮಂದಿರಗಳನ್ನು ಒದಗಿಸಲು ಜೇಮ್ಸ್ ಕನ್ನಡ ಸಿನಿಮಾವನ್ನು ಥಿಯೇಟರ್‌ಗಳಿಂದ ಎತ್ತಂಗಡಿ ಮಾಡುತ್ತಿರುವ ಆರೋಪ ಕೇಳಿ ಬಂದಿತ್ತು. ಆ ಹಿನ್ನೆಲೆಯಲ್ಲಿ ನಟ ಶಿವರಾಜ್‌ಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.